ನವದೆಹಲಿ: ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆ ಸಂಬಂಧ ಕೇಂದ್ರ ಸರ್ಕಾರ ತನಿಖೆ ನಡೆಸಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
'ಇದು ಭಾರತೀಯ ಸಂಸ್ಕೃತಿಯಲ್ಲ': ಆನೆ ಹತ್ಯೆ ಪ್ರಕರಣದ ತನಿಖೆ ಹೊಣೆಹೊತ್ತ ಕೇಂದ್ರ ಸಚಿವ - ಕೇರಳದಲ್ಲಿ ಗರ್ಭಿಣಿ ಆನೆಯ ಹತ್ಯೆ
ಕೇರಳದಲ್ಲಿ ಗರ್ಭಿಣಿ ಆನೆ ಹತ್ಯೆ ಸಂಬಂಧ ಕೇಂದ್ರ ಸರ್ಕಾರ ತನಿಖೆ ನಡೆಸಲಿದೆ. ಪಟಾಕಿ ಸಿಡಿಸಿ ಪ್ರಾಣಿಗಳನ್ನು ಕೊಲ್ಲುವುದು ಭಾರತೀಯ ಸಂಸ್ಕೃತಿಯಲ್ಲ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಗರ್ಭಿಣಿ ಆನೆಗೆ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸ್ ನೀಡಿದ್ದರಿಂದ ಅದು ಸ್ಫೋಟಗೊಂಡು ನೀರಿನಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮೇ 27 ರಂದು ಕೇರಳದ ಮಲಪ್ಪುರಂನಲ್ಲಿ ನಡೆದಿತ್ತು. ಈ ಹೇಯ ಕೃತ್ಯವನ್ನು ಇಡೀ ದೇಶವೇ ಖಂಡಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಆನೆ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸರಿಯಾದ ತನಿಖೆಗೆ ಹಾಗೂ ಆರೋಪಿಗಳ ಬಂಧನಕ್ಕೆ ಯಾವುದೇ ರೀತಿಯಲ್ಲೂ ಅಡ್ಡಿಯಾಗಲು ನಾವು ಬಿಡುವುದಿಲ್ಲ. ಪಟಾಕಿ ಸಿಡಿಸಿ ಪ್ರಾಣಿಗಳನ್ನು ಕೊಲ್ಲುವುದು ಭಾರತೀಯ ಸಂಸ್ಕೃತಿಯಲ್ಲ ಎಂದು ಹೇಳಿದ್ದಾರೆ.