ನವದೆಹಲಿ:ರಾಜ್ಯಸಭೆಯಲ್ಲಿ ಮಹತ್ವದ ಬಿಲ್ ಪಾಸ್ ಆಗಿದ್ದು, ಇನ್ಮುಂದೆ ವಿವಿಧ ಬ್ಯಾಂಕ್ಗಳಲ್ಲಿ ಬ್ಯಾಂಕ್ ಅಕೌಂಟ್ ಓಪನ್ ಮಾಡಲು ಹಾಗೂ ಹೊಸ ಸಿಮ್ ಕಾರ್ಡ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ನೀಡಬೇಕಾದ ಅವಶ್ಯಕತೆ ಇಲ್ಲ.
ಸಿಮ್, ಬ್ಯಾಂಕ್ ಖಾತೆ ಓಪನ್ ಮಾಡಲು ಬೇಕಿಲ್ಲ ಆಧಾರ್ ಕಾರ್ಡ್: ರಾಜ್ಯಸಭೆಯಲ್ಲಿ ಬಿಲ್ ಪಾಸ್ - ರಾಜ್ಯಸಭೆ
ರಾಜ್ಯಸಭೆಯಲ್ಲಿ ಮಹತ್ವದ ಬಿಲ್ ಪಾಸ್ ಆಗಿದ್ದು, ಮೊಬೈಲ್ ಬಳಸುವ ಗ್ರಾಹಕರು ಹಾಗೂ ಬ್ಯಾಂಕ್ ಖಾತೆ ಓಪನ್ ಮಾಡುವವರಿಗೆ ಖುಷಿಯ ಸುದ್ದಿ ನೀಡಿದೆ.
ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಈ ಮಾಹಿತಿ ನೀಡಿದ್ದು, ಆಧಾರ್ ಹಾಗೂ ಇತರೆ ಕಾನೂನು (ತಿದ್ದುಪಡಿ) ವಿಧೇಯಕ, 2019 ಅನ್ನು ನಿನ್ನೆ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಲೋಕಸಭೆಯಲ್ಲಿ ಮಂಡಿಸಿದರು. ಈ ವೇಳೆಮೊಬೈಲ್ ನಂಬರ್ ಹಾಗೂ ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡುವುದರಿಂದ ಡಾಟಾ ಲೀಕ್ ಆಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಬಿಲ್ನಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಬ್ಯಾಂಕ್ಗಳಲ್ಲಿ 50 ಸಾವಿರಕ್ಕೂ ಹೆಚ್ಚಿನ ನಗದು ಹಣ ವಿತ್ ಡ್ರಾ ಮಾಡಲು ಹಾಗೂ ಠೇವಣಿ ಇಡಲು ಪಾನ್ ಕಾರ್ಡ್ ಬದಲು ಆಧಾರ್ ಕಾರ್ಡ್ ಬಳಕೆ ಮಾಡಬಹುದು ಎಂದು ಕೇಂದ್ರ ತಿಳಿಸಿತ್ತು. ಅದರ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಹೊರಬಿದ್ದಿದೆ.