ಕರ್ನಾಟಕ

karnataka

ETV Bharat / bharat

ಮುಗಿಯದ ಮಾತುಕತೆ, ನಿಲ್ಲದ ಪ್ರತಿಭಟನೆ: ಡಿ.9ಕ್ಕೆ ಮತ್ತೊಂದು ಸುತ್ತಿನ ಸಂಧಾನ

ರಾಷ್ಟ್ರ ರಾಜಧಾನಿಯಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಈವರೆಗೆ ನಡೆದ ಎಲ್ಲಾ ಸಂಧಾನ ಸಭೆಗಳು ವಿಫಲವಾಗಿವೆ. ಹೀಗಾಗಿ ಡಿಸೆಂಬರ್ 9 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

f talks
ಮತ್ತೊಂದು ಸುತ್ತಿನ ಸಭೆ

By

Published : Dec 5, 2020, 7:20 PM IST

ನವದೆಹಲಿ:ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರ ಜತೆ ಡಿಸೆಂಬರ್ 9 ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಡಿಸೆಂಬರ್ 9 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ರೈತ ಮುಖಂಡರು ಕೇಂದ್ರ ಸರ್ಕಾರದ ಜತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಬಹುದು ಎಂದು ಕೇಂದ್ರ ಸರ್ಕಾರ ಅಭಿಪ್ರಾಯ ಪಟ್ಟಿದೆ.

ಪ್ರತಿಭಟನಾ ಸ್ಥಳದಲ್ಲಿರುವ ಹಿರಿಯ ನಾಗರಿಕರು ಮತ್ತು ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗಿ. ಕೊರೆಯುವ ಚಳಿಯಲ್ಲಿ ಅವರು ಕಷ್ಟ ಅನುಭವಿಸುತ್ತಿದ್ದಾರೆ. ನಾನು ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತಿದ್ದೇನೆ ಅಂತಾ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮನವಿ ಮಾಡಿದ್ದಾರೆ.

ABOUT THE AUTHOR

...view details