ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರಿಂದಾಗಿ ಸೋಂಕಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳ ಕೊರತೆಯನ್ನು ನೀಗಿಸಲು ನಗರದಲ್ಲಿರುವ 10ರಿಂದ 40 ಹಾಸಿಗೆಗಳ ಸಾಮರ್ಥ್ಯದ ಎಲ್ಲಾ ನರ್ಸಿಂಗ್ ಹೋಮ್ಗಳನ್ನು ಕೋವಿಡ್ ಚಿಕಿತ್ಸಾ ಆಸ್ಪತ್ರೆಗಳಾಗಿ ಪರಿವರ್ತನೆ ಮಾಡಬೇಕೆಂದು ಸಿಎಂ ಅರವಿಂದ್ ಕೇಜ್ರಿವಾಲ್ ಸರ್ಕಾರ ಆದೇಶ ನೀಡಿದೆ.
ಇವುಗಳಲ್ಲಿ ಕಣ್ಣಿನ ಚಿಕಿತ್ಸಾ ಕೇಂದ್ರಗಳು, ಇಎನ್ಟಿ ಆಸ್ಪತ್ರೆಗಳು, ಡಯಾಲಿಸೀಸ್ ಕೇಂದ್ರಗಳು, ಹೆರಿಗೆ ಆಸ್ಪತ್ರೆಗಳು, ಐವಿಎಫ್ ಕೇಂದ್ರಗಳಿಗೆ ವಿನಾಯಿತಿ ನೀಡಲಾಗಿದೆ. ಆದೇಶ ನೀಡಿದ ಮೂರು ದಿನಗಳಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರಗಳಾಗಿನ ಪರಿವರ್ತನೆ ಮಾಡಿಕೊಳ್ಳದಿದ್ದರೇ ಕಾನೂನು ನಿಯಮ ಉಲ್ಲಂಘನೆಯಾಗುತ್ತದೆ ಎಂದು ಸರ್ಕಾರ ನರ್ಸಿಂಗ್ ಹೋಮ್ಗಳಿಗೆ ಎಚ್ಚರಿಕೆ ನೀಡಿದೆ.