ಕರ್ನಾಟಕ

karnataka

ETV Bharat / bharat

ತಮಿಳುನಾಡು ಸಿಎಂ ಕಚೇರಿಯ ಅಧಿಕಾರಿಯನ್ನು ಬಲಿ ಪಡೆದ ಕೊರೊನಾ

ತಮಿಳುನಾಡು ಮುಖ್ಯಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಅಧಿಕಾರಿಯೊಬ್ಬರು ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ.

Tamil Nadu CM's office died
ಮುಖ್ಯಮಂತ್ರಿ ಕಚೇರಿಯ ಅಧಿಕಾರಿಯನ್ನು ಬಲಿ ಪಡೆದ ಕೊರೊನಾ

By

Published : Jun 17, 2020, 11:54 PM IST

ಚೆನ್ನೈ (ತಮಿಳುನಾಡು):ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಅಧಿಕಾರಿ ಬಿ.ಜೆ.ದಾಮೋಧರನ್ ಅವರು ಕೋವಿಡ್ -19 ನಿಂದ ನಿಧನರಾಗಿದ್ದಾರೆ

ಪಳನಿಸ್ವಾಮಿ ಕಚೇರಿಯಲ್ಲಿ ಖಾಸಗಿ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದ ದಾಮೋಧರನ್ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಚಿಕಿತ್ಸೆಗಾಗಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಅಧಿಕಾರಿಯ ಸಾವಿಗೆ ಬೇಸರ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಪಳನಿಸ್ವಾಮಿ, ದಾಮೋಧರನ್ ಅವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಭರವಸೆ ನಿಡಿದ್ದಾರೆ. ಅಧಿಕಾರಿ ಸಾವಿಗೆ ಸಂತಾಪ ಸೂಚಿಸಿದ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್, ರಾಜ್ಯಾದ್ಯಂತ ತನ್ನ ಅಧಿಕಾರಿಗಳ ಸುರಕ್ಷತೆಯನ್ನು ಸರ್ಕಾರ ಖಚಿತಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ABOUT THE AUTHOR

...view details