ನವದೆಹಲಿ:ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ ಹಿನ್ನೆಲೆಯಲ್ಲಿ, ಬಿಜೆಪಿಯು ಸೆಪ್ಟೆಂಬರ್ ತಿಂಗಳ ಮಧ್ಯದಲ್ಲಿ ಒಂದು ವಾರದ ಅವಧಿಯ 'ಸೇವಾ ಸಪ್ತಾಹ' ಕಾರ್ಯಕ್ರಮವನ್ನು ಆಯೋಜಿಸಲಿದೆ.
ಒಂದು ವಾರದ ಅವಧಿಯ ಈ ಕಾರ್ಯಕ್ರಮದಲ್ಲಿ ರಾಷ್ಟ್ರದಾದ್ಯಂತ ಪಕ್ಷದ ಮುಖಂಡರು ವಿಭಿನ್ನ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ. ಸೇವಾ ಸಪ್ತಾಹದ ಸಮಯದಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳನ್ನು ತಿಳಿಸಿ, ಪಕ್ಷವು ಎಲ್ಲಾ ರಾಜ್ಯ ಘಟಕದ ಮುಖ್ಯಸ್ಥರಿಗೆ ಸುತ್ತೋಲೆ ಕಳುಹಿಸಿದೆ. ಇದು ಪ್ರಧಾನಿ ಮೋದಿಯವರ 70 ನೇ ಹುಟ್ಟುಹಬ್ಬವಾಗಿರುವುದರಿಂದ ಈ ಕಾರ್ಯಕ್ರಮದ ವಿಷಯವು 'ಸೆವೆಂಟಿ' ಆಗಿರಲಿದೆ.