ಸಿದ್ದಿಪೇಟ:ನಿಂತಿದ್ದ ಕಂಟೈನರ್ಗೆ ಡಿಕ್ಕಿ ಹೊಡೆದ ಕಾರು ನುಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಗಜ್ವೇಲ್ನಲ್ಲಿ ನಡೆದಿದೆ.
ಭೀಕರ ಅಪಘಾತದಲ್ಲಿ ಹಾರಿ ಹೋದ ಕಾರಿನ ಟಾಪ್: ಮೂವರ ದುರ್ಮರಣ - ಗಜ್ವೇಲ್ ಅಪಘಾತ ಸುದ್ದಿ
ಭೀಕರ ರಸ್ತೆ ಅಪಘಾತದಲ್ಲಿ ಕಾರಿನ ಟಾಪ್ ಹಾರಿ ಹೋಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಕರೀಂನಗರ್ ಜಿಲ್ಲೆಯ ವೇಗುರುಪಲ್ಲಿ ಗ್ರಾಮಕ್ಕೆ ಸೇರಿದ ಹಲವರು ಭಾನುವಾರ ಹೈದರಾಬಾದ್ನಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ಬಂದಿದ್ದರು. ಬಳಿಕ ವಾಪಸಾಗುತ್ತಿದ್ದ ವೇಳೆ ಭಾನುವಾರ ಮಧ್ಯರಾತ್ರಿ 12:30ರ ಸುಮಾರಿಗೆ ಗಜ್ವೇಲ್ ತಾಲೂಕಿನ ಪ್ರಜ್ಞಾಪುರ್ ಶಿವಾರುನ ಹೈವೇಯಲ್ಲಿ ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಟಾಪ್ ಹಾರಿ ಹೋಗಿದ್ದು, ಕಾರಿನಲ್ಲಿದ್ದ ಮಲ್ಲೇಶಂ (48), ಅಲ್ಗುವೆಲ್ಲಿ ಜರ್ದಾನ್ರೆಡ್ಡಿ (48), ಜಂಗ ಪ್ರಭಾಕರ್ ರೆಡ್ಡಿ (58) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.