ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಸೊಸೆಯ ಬ್ಯಾಗ್ ಎಗರಿಸಿ ಪರಾರಿಯಾಗಿದ್ದ ಬೈಕ್ ಸವಾರರ ಪೈಕಿ ಓರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು ನರೇಂದ್ರ ಮೋದಿ ಸೊಸೆ ದಮಯಂತಿ ಬೆನ್ ಬ್ಯಾಗ್ ಕಸಿದುಕೊಂಡು ಪರಾರಿಯಾಗಿದ್ದರು. ಬ್ಯಾಗ್ನಲ್ಲಿ ಎರಡು ಮೊಬೈಲ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಹಾಗೂ 56 ಸಾವಿರ ರೂಪಾಯಿ ನಗದು ಇತ್ತು ಎಂದು ತಿಳಿದು ಬಂದಿದೆ.
ಮೋದಿ ಸೊಸೆ ಬ್ಯಾಗನ್ನೂ ಬಿಡದ ಕಳ್ಳರು! ಎರಡು ಮೊಬೈಲ್ ಸೇರಿ ಇಷ್ಟೊಂದು ಹಣ ಕಳ್ಳತನ
ದಮಯಂತಿ ತಮ್ಮ ಕುಟುಂಬಸ್ಥರೊಂದಿಗೆ ಅಮೃತಸರ ಹಾಗೂ ಧರ್ಮಶಾಲಾ ಸುತ್ತಾಡಿಕೊಂಡು ನಿನ್ನೆ ಬೆಳಗ್ಗೆ ದೆಹಲಿಗೆ ಆಗಮಿಸಿದ್ದರು. ಸಿವಿಲ್ ಲೈನ್ನಲ್ಲಿರುವ ಗುಜರಾತಿ ಭವನದಲ್ಲಿ ರೂಂ ಬುಕ್ ಮಾಡಿದ್ದರು. ಬೆಳಗ್ಗೆ 7 ಗಂಟೆಗೆ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ಕಳ್ಳರು ಕೈಚಳಕ ತೋರಿ ಪರಾರಿಯಾಗಿದ್ದರು.
ಈ ಬಗ್ಗೆ ದಮಯಂತಿ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಿಸಿಟಿವಿ ದೃಶ್ಯಗಳನ್ನ ಪರಿಶೀಲನೆ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳ ಪೈಕಿ ಓರ್ವವನ್ನ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.