ಪೂಂಚ್ (ಜಮ್ಮು ಮತ್ತು ಕಾಶ್ಮೀರ): ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನದ ಶೆಲ್ ದಾಳಿಯಿಂದ ವೃದ್ಧ ನಾಗರಿಕರೊಬ್ಬರು ಮೃತಪಟ್ಟಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.
ಮುಂಜಾನೆ 2 ಗಂಟೆ ಸುಮಾರಿಗೆ ಬಾಲಕೋಟೆ ಮತ್ತು ಮೆಂಧರ್ ವಲಯಗಳಲ್ಲಿನ ಎಲ್‌ಒಸಿ ಉದ್ದಕ್ಕೂ ಸಣ್ಣ ಶಸ್ತ್ರಾಸ್ತ್ರಗಳು ಮತ್ತು ತೀವ್ರವಾದ ಶೆಲ್ ದಾಳಿ ಮೂಲಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.