ಕರ್ನಾಟಕ

karnataka

ETV Bharat / bharat

ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಓರ್ವ ರೋಗಿ ಸಾವು, ಮೂವರು ಗಂಭೀರ - ಅಗ್ನಿ ಅವಘಡದಿಂದ ಓರ್ವ ಸಾವು

ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಓರ್ವ ರೋಗಿ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ ಬಳಿಯ ಮುಲುಂದ್ ಪ್ರದೇಶದಲ್ಲಿ ನಡೆದಿದೆ.

fire breaks out at hospital
ಆಸ್ಪತ್ರೆಯಲ್ಲಿ ಅಗ್ನಿ ಅವಘಡ

By

Published : Oct 13, 2020, 7:10 AM IST

ಮುಂಬೈ:ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿ ಓರ್ವ ರೋಗಿ ಸಾವನ್ನಪ್ಪಿರುವ ಘಟನೆ ಮುಂಬೈನ ಮುಲುಂದ್ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಇದೇ ವೇಳೆ ಸುಮಾರು 40 ರೋಗಿಗಳನ್ನು ಹತ್ತಿರದ ಬೇರೆ ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ.

ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಸೋಮವಾರ ರಾತ್ರಿ ಅಪೆಕ್ಸ್​ ಆಸ್ಪತ್ರೆಯಲ್ಲಿ ಘಟನೆ ಸಂಭವಿಸಿದ್ದು, ಬೇರೆ ಆಸ್ಪತ್ರೆಗೆ ಸ್ಥಳಾಂತರ ಮಾಡಿದ ನಂತರ ರೋಗಿ ಮೃತಪಟ್ಟಿದ್ದಾನೆ ಎಂದು ಬೃಹನ್ಮುಂಬೈ ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ಜನರೇಟರ್​​ನಲ್ಲಿ ಅಧಿಕ ಉಷ್ಣಾಂಶ ಕಾಣಿಸಿಕೊಂಡ ಕಾರಣದಿಂದ ಅಗ್ನಿ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಲುಂದ್ ಪ್ರದೇಶದಲ್ಲಿನ ಐದು ನರ್ಸಿಂಗ್ ಹೋಮ್​ಗಳಿಗೆ ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ. ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ರೋಗಿಗಳ ಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯ ಶಾಸಕ ಮಹಿರ್ ಕೊಟೆಚಾ ಮಾಹಿತಿ ನೀಡಿದ್ದಾರೆ.

ಸೋಮವಾರ ಸಂಜೆ 6.30ಕ್ಕೆ ಆಸ್ಪತ್ರೆಯ ಜನರೇಟರ್​ನಲ್ಲಿ ಸ್ವಲ್ಪ ಮಟ್ಟದ ಬೆಂಕಿ ಕಾಣಿಸಿಕೊಂಡಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ABOUT THE AUTHOR

...view details