ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿ: ಓರ್ವ ಸಾವು, ನಾಲ್ಕು ಮಂದಿ ಗಂಭೀರ - ಉತ್ತರ ಪ್ರದೇಶದ ಗಾಜಿಯಾಬಾದ್ ನ್ಯೂಸ್
ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಇಟ್ಟಿಗೆ ತುಂಬಿದ ಟ್ರಕ್ ಪಲ್ಟಿ: ಒಬ್ಬ ಸಾವು, ನಾಲ್ಕು ಮಂದಿ ಗಂಭೀರ
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಲೋನಿ ಸರ್ಕಲ್ ಅಧಿಕಾರಿ ಅತುಲ್ ಸೋಂಕರ್ ತಿಳಿಸಿದ್ದಾರೆ.
ಸೋಮವಾರ ಮುಂಜಾನೆ 2 ಗಂಟೆ ಸುಮಾರಿಗೆ ಗಾಜಿಯಾಬಾದ್‌ನ ಲೋನಿಯ ಟ್ರೊನಿಕಾ ಸಿಟಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಇಟ್ಟಿಗೆ ತುಂಬಿದ್ದ ಟ್ರಕ್ ಪಲ್ಟಿಯಾಗಿದೆ. ಟ್ರಕ್‌ನ ಕೆಳಗೆ ಸಿಕ್ಕ ಇ-ರಿಕ್ಷಾ ಪುಡಿಪುಡಿಯಾಗಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ ಹಾಗೂ ನಾಲ್ಕು ಮಂದಿ ಗಾಯಗೊಂಡಿದ್ದಾರೆ ಎಂದು ಸೋಂಕರ್ ಮಾಹಿತಿ ನೀಡಿದರು.