ಕೊಚ್ಚಿ(ಕೇರಳ):ಕೇರಳದ ಹೈ ಪ್ರೊಫೈಲ್ ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳದ ಹೈ ಪ್ರೊಫೈಲ್ ಚಿನ್ನ ಕಳ್ಳಸಾಗಣೆ ಪ್ರಕರಣ, ಮತ್ತೋರ್ವ ಆರೋಪಿ ಬಂಧನ
ಕೇರಳದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಕೊಚ್ಚಿಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ..
ಚಿನ್ನ ಕಳ್ಳಸಾಗಣೆ
ಮಲಪ್ಪುರಂ ಜಿಲ್ಲೆಯ ಮಂಜೆರಿ ಮೂಲದ ಹಮ್ಜತ್ ಅಬ್ದು ಸಲಾಮ್ ಎಂಬಾತನನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಅವರನ್ನು ಇಂದು ಕೊಚ್ಚಿಯ ಆರ್ಥಿಕ ಅಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ಕಳ್ಳಸಾಗಣೆ ಮಾಡಿದ ಚಿನ್ನವನ್ನು ಖರೀದಿಸಲು ಸಲಾಮ್ ತನ್ನ ಸ್ವಂತ ಹಣವನ್ನು ಖರ್ಚು ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.