ಸೋನಿಪತ್ (ಹರಿಯಾಣ):ದೆಹಲಿ-ಹರಿಯಾಣ ಗಡಿ ಭಾಗವಾದ ಸಿಂಘು ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ವಿರುದ್ಧ ಕಳೆದ 20 ದಿನಗಳಿಂದ ರೈತರ ಪ್ರತಿಭಟನೆ ನಡೆದಿದೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ರೈತ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ.
ಸಿಂಘು ಗಡಿಯಲ್ಲಿ ಹೃದಯಾಘಾತದಿಂದ ಮತ್ತೋರ್ವ ರೈತ ಸಾವು - ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರೈತರ ಪ್ರತಿಭಟನೆ

ಸಿಂಘು ಗಡಿಯಲ್ಲಿ ಹೃದಯಾಘಾತದಿಂದ ಮತ್ತೋರ್ವ ರೈತ ಸಾವು
13:11 December 16
ಸಿಂಘು ಗಡಿಯಲ್ಲಿ ಹೃದಯಾಘಾತದಿಂದ ಮತ್ತೋರ್ವ ರೈತ ಸಾವು
ಪಂಜಾಬ್‌ನ ರೈತ ಪಾಲಾ ಸಿಂಗ್ ಪಟಿಯಾಲ ಮೃತ ರೈತ ಎಂದು ಗುರುತಿಸಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ರೈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ರವಾನಿಸಿದ್ದಾರೆ.
ಓದಿ:ಸಿಂಘು ಗಡಿಯಲ್ಲಿ ಪ್ರತಿಭಟಿಸುತ್ತಿದ್ದ ರೈತ ಹೃದಯಾಘಾತದಿಂದ ಸಾವು
ರೈತರ ಆಂದೋಲನವು ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದೆ. ಇನ್ನು ಈ ಹೋರಾಟದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಸಂಖ್ಯೆ 5 ಕ್ಕೆ ಏರಿದೆ.
Last Updated : Dec 16, 2020, 2:35 PM IST