ಸೋನಿಪತ್ (ಹರಿಯಾಣ): ದೆಹಲಿ-ಹರಿಯಾಣ ಗಡಿ ಭಾಗವಾದ ಸಿಂಘು ಗಡಿಯಲ್ಲಿ ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮತ್ತೊಬ್ಬ ರೈತ ಸಾವನ್ನಪ್ಪಿದ್ದಾರೆ.
ಸಿಂಘು ಗಡಿಯಲ್ಲಿ ಮತ್ತೊಬ್ಬ ಪ್ರತಿಭಟನಾನಿರತ ರೈತ ಸಾವು
12:10 December 17
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮತ್ತೊಬ್ಬ ರೈತ ಕುಸಿದು ಬಿದ್ದು ಸಿಂಘು ಗಡಿಯಲ್ಲಿ ಮೃತಪಟ್ಟಿದ್ದಾರೆ.
ಮೃತ ರೈತನನ್ನು ಪಂಜಾಬ್‌ನ ಭೀಮ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರತಿಭಟಿಸುತ್ತಿರುವ ವೇಳೆ ಕುಸಿದು ಬಿದ್ದು ಭೀಮ್ ಸಿಂಗ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
ಸಿಂಘು ಗಡಿಯಲ್ಲಿ ಈವರೆಗೆ ಹೃದಯಾಘಾತದಿಂದ ಇಬ್ಬರು ರೈತರು, ಆತ್ಮಹತ್ಯೆಗೆ ಶರಣಾಗಿ ಒಬ್ಬ ರೈತ ಸೇರಿದಂತೆ 5-6 ರೈತರು ಪ್ರತಿಭಟನೆ ವೇಳೆ ಪ್ರಾಣ ಕಳೆದುಕೊಂಡಿದ್ದಾರೆ.
ಓದಿ:ಸರ್ಕಾರದ ದಬ್ಬಾಳಿಕೆ ವಿರೋಧಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ: ಡೆತ್ನೋಟ್ ಬರೆದಿಟ್ಟು ಗುಂಡು ಹಾರಿಸಿಕೊಂಡ ರೈತ
ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳ ವಿರುದ್ಧ ಸಿಂಘು, ಟಿಕ್ರಿ ಸೇರಿದಂತೆ ದೆಹಲಿಯ ಗಡಿಗಳಲ್ಲಿ ಪಂಜಾಬ್ ಹಾಗೂ ಹರಿಯಾಣ ರೈತರು ಕಳೆದ 20 ದಿನಗಳಿಂದ 'ದೆಹಲಿ ಚಲೋ' ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಭಾಗಗಳಲ್ಲೇ ರೈತರನ್ನು ದೆಹಲಿ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಪಟ್ಟುಬಿಡದ ರೈತರು ಬಿಸಿಲು-ಚಳಿ ಎನ್ನದೇ ಹಗಲು-ರಾತ್ರಿ ಧರಣಿ ಮುಂದುವರೆಸಿದ್ದಾರೆ. ಕೇಂದ್ರ ಸರ್ಕಾರ ರೈತ ಮುಖಂಡರೊಂದಿಗೆ ನಡೆಸಿದ ಮಾತುಕತೆಗಳೂ ವಿಫಲವಾಗಿವೆ.