ನವದೆಹಲಿ: ದೇಶಾದ್ಯಂತ ಈಗಾಗಲೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ ಈಗಾಗಲೇ ದೇಶಾದ್ಯಂತ ಜಾರಿಯಲ್ಲಿದ್ದು, ಅದೇ ರೀತಿ ಕೇಂದ್ರ ಸರ್ಕಾರ ಇದೀಗ ಮತ್ತೊಂದು ಮಹತ್ವದ ಯೋಜನೆ ಜಾರಿಗೊಳಿಸಲು ಸಿದ್ಧತೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಒನ್ ನೇಷನ್ ಒನ್ ಹೆಲ್ತ್ ಕಾರ್ಡ್ ಯೋಜನೆ ಜಾರಿಗೆ ತರಲು ಮೋದಿ ಸರ್ಕಾರ ಯೋಜನೆ ಜಾರಿಗೆ ತರಲು ಮುಂದಾಗಿದ್ದು, ಆಗಸ್ಟ್ 15ರಂದು ಈ ಮಹತ್ವದ ಯೋಜನೆ ಘೋಷಣೆಯಾಗುವ ಸಾಧ್ಯತೆ ದಟ್ಟವಾಗಿದೆ.
ದೇಶದಲ್ಲಿನ ಪ್ರತಿಯೊಬ್ಬ ವ್ಯಕ್ತಿಗೂ ಆರೋಗ್ಯ ಸೇವೆ ಲಭ್ಯವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಯೋಜನೆ ಘೋಷಣೆ ಮಾಡುವ ಸಾಧ್ಯತೆ ಇದೆ. ಪ್ರತಿಯೊಬ್ಬ ವ್ಯಕ್ತಿಯ ಹೆಲ್ತ್ ಕಾರ್ಡ್ ತಯಾರಿಸಿ, ಅದರ ಮಾಹಿತಿ ಡಿಜಿಟಲ್ ರೂಪದಲ್ಲಿ ದಾಖಲು ಮಾಡುವ ಯೋಜನೆ ಇದಾಗಿದೆ.
ದೇಶದ ಯಾವುದೇ ಆಸ್ಪತ್ರೆಗೆ ಚಿಕಿತ್ಸೆಗೋಸ್ಕರ ತೆರಳಿದಾಗ ಈ ಹಿಂದಿನ ರಶೀದಿ ಅಥವಾ ಪರೀಕ್ಷಾ ಮಾಹಿತಿಯ ಎಲ್ಲ ದಾಖಲಾತಿ ತೆಗೆದುಕೊಂಡು ಹೋಗುವ ಅವಶ್ಯಕತೆ ಇರಲ್ಲ. ಇದಕ್ಕಾಗಿ ಮೊದಲ ಹಂತದಲ್ಲಿ 500 ಕೋಟಿ ರೂ ಬಜೆಟ್ ಮೀಸಲಿಡಲು ನಿರ್ಧರಿಸಲಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯ ಮಾಹಿತಿ ಗೌಪ್ಯತೆ ಕಾಪಾಡಿಕೊಳ್ಳುವ ಸಾಧ್ಯತೆ ಇದೆ. ಉಳಿದಂತೆ ವ್ಯಕ್ತಿಯ ಆರೋಗ್ಯದ ಮಾಹಿತಿ ವೈದ್ಯರು, ಆಸ್ಪತ್ರೆ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಗೊತ್ತಾಗುವುದಿಲ್ಲ.