ಛತ್ತೀಸ್ಗಡ:ನಕ್ಸಲರು ಹಾಗೂ ಪೊಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಮಾವೋವಾದಿ ಮೃತಪಟ್ಟಿದ್ದಾನೆ.
ಛತ್ತೀಸ್‌ಗಢದಲ್ಲಿ ಪೊಲೀಸರ ಗುಂಡಿನ ದಾಳಿ: ಓರ್ವ ಮಾವೋವಾದಿ ಮೃತ
ಪೊಲೀಸರು ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಓರ್ವ ಮಾವೋವಾದಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಹರ್ರೆಪಾಲ್-ಬೆಚಪಾಲ್ ಅರಣ್ಯ ಪ್ರದೇಶದಲ್ಲಿ ಶಸ್ತ್ರಸಜ್ಜಿತ ಮಾವೋವಾದಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಅಧಿಕಾರಿಯೊಬ್ಬರ ಗುಂಡಿನ ದಾಳಿಗೆ ನಕ್ಸಲ್ ಸಾವನ್ನಪ್ಪಿದ್ದಾನೆ. ಆತನ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ ಎಂದು ದಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.
ಮೃತ ನಕ್ಸಲ್ ದಸ್ರು ಪುನೇಮ್ ಎಂದು ಗುರುತಿಸಲಾಗಿದ್ದು, ಆತ ಸುಮಾರು 8 ಲಕ್ಷ ರೂ.ಗಳನ್ನು ತೆಗೆದುಕೊಂಡು ಸಾಗುತ್ತಿದ್ದ ಎನ್ನಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ.