ಕರ್ನಾಟಕ

karnataka

ETV Bharat / bharat

ಓರ್ವ ಉಗ್ರಗಾಮಿಯನ್ನ ಹೊಡೆದುರುಳಿಸಿದ ಭಾರತೀಯ ಸೇನೆ - ಉಗ್ರರ ಮೇಲೆ ಗುಂಡಿನ ದಾಳಿ

ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ.

ಉಗ್ರಗಾಮಿಯನ್ನ ಹೊಡೆದುರುಳಿಸಿದ ಭಾರತೀಯ ಸೇನೆ

By

Published : Nov 10, 2019, 8:34 PM IST

ಶ್ರೀನಗರ:ಉತ್ತರ ಕಾಶ್ಮೀರದ ಬಂಡೀಪುರ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ ಓರ್ವ ಉಗ್ರಗಾಮಿಯನ್ನು ಹೊಡೆದುರುಳಿಸಿದೆ.

ಉಗ್ರಗಾಮಿಗಳಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಕಾರ್ಯಾಚರಣೆಗೆ ಇಳಿಯಿತು. ಈ ವೇಳೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಕಾಳಗ ನಡೆದಿದೆ. ಘಟನೆಯಲ್ಲಿನ ಓರ್ವ ಉಗ್ರನನ್ನ ಹೊಡೆದುರುಳಿಸಲಾಗಿದೆ.

ಶ್ರೀನಗರದಿಂದ 55 ಕಿ.ಮೀ. ದೂರದ ಲಾಡರ ಗ್ರಾಮದಲ್ಲಿ ಈಗಲೂ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ABOUT THE AUTHOR

...view details