ನವದೆಹಲಿ:ರಾಜ್ಯಸಭೆಯಲ್ಲಿ ಸಂಸದರನ್ನು ಅಮಾನತುಗೊಳಿಸಿದಾಗಿನಿಂದ ಪ್ರತಿಪಕ್ಷಗಳ ಸದಸ್ಯರು ಆಡಳಿತ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ರಾಜ್ಯಸಭಾ ಅಧಿವೇಶನ ಬಹಿಷ್ಕರಿಸಿ ಸಂಸತ್ ಆವರಣದಲ್ಲಿ ಪ್ರತಿಪಕ್ಷಗಳ ಸದಸ್ಯರು ಪ್ರತಿಭಟನೆಗೆ ಮುಂದಾಗಿದ್ದಾರೆ.
ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್ ಹೇಳಿಕೆಯೊಂದನ್ನು ಹೊರಡಿಸಿದ್ದು, ಕಾಂಗ್ರೆಸ್ ಹಾಗೂ ಸಮಾನಮನಸ್ಕ ಪಕ್ಷಗಳು ರಾಜ್ಯಸಭೆಯನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕಲಾಪ ಬಹಿಷ್ಕಾರಕ್ಕೆ ಹಲವು ಕಾರಣಗಳನ್ನು ನೀಡಿದ್ದು, ಸಂಸದರ ಅಮಾನತು, ಪ್ರತಿಪಕ್ಷದ ಸದಸ್ಯರಿಗೆ ಅಭಿಪ್ರಾಯ ವ್ಯಕ್ತಪಡಿಸಲು ಅನುಮತಿ ನೀಡದಿರುವುದು ಹಾಗೂ ಮಸೂದೆಗಳನ್ನು ವಿಶ್ಲೇಷಣೆಗೆ ಸ್ಥಾಯಿ ಸಮಿತಿ ಅಥವಾ ಆಯ್ಕೆ ಸಮಿತಿಗೆ ಅವಕಾಶ ನೀಡದಿರುವುದೇ ಪ್ರಮುಖ ಕಾರಣ ಎಂದು ಕಾಂಗ್ರೆಸ್ ಹೇಳಿದೆ.