ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಕರೆದಿರುವ 22 ರಾಜಕೀಯ ಪಕ್ಷಗಳ ಸಭೆಯಲ್ಲಿ ಅಂಫಾನ್ ಚಂಡಮಾರುತದಿಂದ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಲಾಯಿತು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎನ್‌ಸಿಪಿ ಮುಖಂಡ ಶರದ್ ಪವಾರ್ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಸಭೆಯಲ್ಲಿ ಭಾಗವಹಿಸಿದ್ದರು.
ಒಡಿಶಾ ಮತ್ತು ಪಶ್ಚಿಮ ಬಂಗಾಳದ ಜನರಿಗೆ ತುರ್ತಾಗಿ ಸರ್ಕಾರಗಳು ಮತ್ತು ಜನರ ಬೆಂಬಲ ಹಾಗೂ ಒಗ್ಗಟ್ಟಿನ ಅವಶ್ಯಕತೆ ಇದೆ ಎಂದು ಪ್ರತಿಪಕ್ಷಗಳು ಅಭಿಪ್ರಾಯಪಟ್ಟರು. ಇದನ್ನು ಕೇಂದ್ರ ಸರ್ಕಾರ ತಕ್ಷಣವೇ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ವಿಪತ್ತು ಪೀಡಿತ ರಾಜ್ಯಗಳಿಗೆ ಸಹಾಯ ಮಾಡಬೇಕೆಂದು ಒತ್ತಾಯಿಸಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್, ಸಿಪಿಐ (ಎಂ) ಮುಖ್ಯಸ್ಥ ಸೀತಾ ರಾಮ್ ಯೆಚೂರಿ ಮತ್ತು ಸಿಪಿಐ ಮುಖಂಡ ಡಿ.ರಾಜಾ ಸಭೆಯಲ್ಲಿ ಉಪಸ್ಥಿತರಿದ್ದರು.
ಶರದ್ ಯಾದವ್, ಉಪೇಂದ್ರ ಕುಶ್ವಾಹ, ತೇಜಶ್ವಿ ಯಾದವ್, ಒಮರ್ ಅಬ್ದುಲ್ಲಾ, ಜಿತನ್ ರಾಮ್ ಮಾಂಜಿ, ಎನ್.ಕೆ. ಪ್ರೇಮಚಂದ್ರನ್, ಜಯಂತ್ ಸಿಂಗ್, ಬದ್ರುದ್ದೀನ್ ಅಜ್ಮಲ್ ರಾಜು ಶೆಟ್ಟಿ, ಪಿ.ಕೆ. ಕುನ್ಹಾಲಿಕುಟ್ಟಿ ಮತ್ತು ತಿರುಮಾವಾಲವನ್ ಕೂಡ ಸಭೆಯಲ್ಲಿ ಭಾಗಿಯಾಗಿದ್ದರು.