ನವದೆಹಲಿ:ಬಿಜೆಪಿ ಸಂಸದೀಯ ಪಕ್ಷದ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ಮಾತುಗಳು ಪ್ರಸ್ತಾಪವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.
ಸಭೆ ಬಳಿಕ ಮಾತನಾಡಿದ ಪ್ರಹ್ಲಾದ್ ಜೋಶಿ, ಪೌರತ್ವ ತಿದ್ದುಪಡಿ ಮಸೂದೆ ಐತಿಹಾಸಿಕ ಮಸೂದೆ ಎಂದು ಮೋದಿ ಬಣ್ಣಿಸಿದ್ದಾರೆ. ಧರ್ಮದ ಹೆಸರಿನಲ್ಲಿ ಕಿರುಕುಳ ಅನುಭವಿಸಿ ಜನರಿಗೆ ಮಸೂದೆಯನ್ನು ಸುವರ್ಣಾಕ್ಷರಗಳಲ್ಲಿ ಬರೆಯಲಾಗುವುದು ಎಂದು ಮೋದಿ ಹೇಳಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.