ನವದೆಹಲಿ:ಕೋವಿಡ್19 ವಿರುದ್ಧ ಹೋರಾಡುತ್ತಿರುವ ವೈದ್ಯ ಸಿಬ್ಬಂದಿಯ ರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ 'ಸಾಂಕ್ರಾಮಿಕ ರೋಗ (ತಿದ್ದುಪಡಿ) ಕಾಯ್ದೆ-2020'ಕ್ಕೆ ಸುಗ್ಗೀವಾಜ್ಞೆ ಹೊರಡಿಸಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ವೈದ್ಯರು, ಸಿಬ್ಬಂದಿ ರಕ್ಷಣೆಗಾಗಿ ಸುಗ್ರೀವಾಜ್ಞೆ- ಪ್ರಧಾನಿ ಮೋದಿ ಸಮರ್ಥನೆ - ಪ್ರಧಾನಿ ನರೇಂದ್ರ ಮೋದಿ ಟ್ವೀಟ್
ದೇಶದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಮೇಲಿನ ಹಲ್ಲೆಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಎಲ್ಲ ಆರೋಗ್ಯ ಸಿಬ್ಬಂದಿಯ ರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಇದಕ್ಕಾಗಿ ಸುಗ್ರೀವಾಜ್ಞೆ ತಂದಿರುವುದಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಸೆಣಸುತ್ತಿರುವ ಎಲ್ಲ ವೈದ್ಯರು, ನರ್ಸ್‌ಗಳು ಹಾಗೂ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಸುಗ್ರೀವಾಜ್ಞೆಯ ಅಸ್ತ್ರ ನೆರವಾಗಲಿದೆ. ವೈದ್ಯ ಸಿಬ್ಬಂದಿ ರಕ್ಷಣೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ವೈದ್ಯರ ಮೇಲಿನ ಹಲ್ಲೆಗಳಿಗೆ ಇತಿಶ್ರೀ ಹಾಡಲು ಕೇಂದ್ರ ಸರ್ಕಾರ ಇಂದು ಸುಗ್ರೀವಾಜ್ಞೆ ಹೊರಡಿಸಿದೆ. ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿರುವುದು ದೃಢಪಟ್ಟರೆ ಅಂತಹವರ ವಿರುದ್ಧ ಜಾಮೀನು ರಹಿತ ಅಪರಾಧ ಪ್ರಕರಣ ದಾಖಲಿಸಲಾಗುತ್ತದೆ. ಜೊತೆಗೆ 6 ತಿಂಗಳಿನಿಂದ 7 ವರ್ಷದ ವರೆಗೆ ಜೈಲು ಶಿಕ್ಷೆ, 1 ರಿಂದ 7 ಲಕ್ಷ ರೂಪಾಯಿ ವರೆಗೆ ದಂಡ ವಿಧಿಸುವ ಅವಕಾಶವಿದೆ.