ಗುವಾಹತಿ (ಅಸ್ಸೋಂ):ದೇಶದ ವಿವಿಧ ಕೋರ್ಟ್ಗಳಲ್ಲಿ ಸಾವಿರಕ್ಕೂ ಅಧಿಕ ಪ್ರಕರಣಗಳು ಸುಮಾರು 50 ವರ್ಷಗಳಿಂದ ಬಾಕಿ ಇದೆ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹೇಳಿದ್ದಾರೆ!
ದೇಶಾದ್ಯಂತ ಕೋರ್ಟ್ಗಳಲ್ಲಿ ಲಕ್ಷಗಟ್ಟಲೆ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ! - ಶೀಘ್ರದಲ್ಲಿ ವಿಚಾರಣೆ ಅಂತ್ಯಗೊಳಿಸುವಂತೆ ಗೊಗೊಯ್ ಸೂಚನೆ
ಸದ್ಯ ದೇಶದ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಾಮುಖ್ಯತೆ ಆಧಾರದಲ್ಲಿ ಕೈಗೆತ್ತಿಕೊಂಡು ಆದಷ್ಟು ಶೀಘ್ರ ವಿಚಾರಣೆ ಅಂತ್ಯಗೊಳಿಸುವಂತೆ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಸೂಚಿಸಿದ್ದಾರೆ.
ಕೋರ್ಟ್
ಒಂದು ಸಾವಿರಕ್ಕೂ ಅಧಿಕ ಪ್ರಕರಣಗಳು 50 ವರ್ಷ ಮೇಲ್ಪಟ್ಟಿದ್ದರೆ, ಬರೋಬ್ಬರಿ 2 ಲಕ್ಷಕ್ಕೂ ಅಧಿಕ ಪ್ರಕರಣಗಳ ವಿಚಾರಣೆ ಕಳೆದ 25 ವರ್ಷಗಳಲ್ಲಿ ಅಂತ್ಯ ಕಂಡಿಲ್ಲ ಎಂದು ಗುವಾಹತಿಯಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ರಂಜನ್ ಗೊಗೊಯಿ ತಿಳಿಸಿದ್ರು.
ಸದ್ಯ ದೇಶದ ಎಲ್ಲಾ ಕೋರ್ಟ್ಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಾಮುಖ್ಯತೆ ಆಧಾರದಲ್ಲಿ ಆದಷ್ಟು ಶೀಘ್ರದಲ್ಲಿ ವಿಚಾರಣೆ ಅಂತ್ಯಗೊಳಿಸುವಂತೆ ಅವರು ಎಲ್ಲಾ ಅಧೀನ ನ್ಯಾಯಾಲಯಗಳಿಗೆ ಸೂಚಿಸಿದ್ದಾರೆ.
TAGGED:
Cases Pending in Courts