ಕರ್ನಾಟಕ

karnataka

ETV Bharat / bharat

ತೆಲಂಗಾಣದಲ್ಲಿ 5 ಸಾವಿರಕ್ಕೂ ಹೆಚ್ಚು ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ:ಆರೋಗ್ಯ ಸಚಿವರಿಂದ ಮಾಹಿತಿ - ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ

ಕೊರೊನಾ ಸೋಂಕಿಗೆ ತುತ್ತಾಗಿ, ಲಕ್ಷಣರಹಿತ ಅಥವಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಮನೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತೆಲಂಗಾಣ ಆರೋಗ್ಯ ಸಚಿವ ಇ.ರಾಜೇಂದರ್ ತಿಳಿಸಿದ್ದಾರೆ.

Covid patients undergoing treatment at home
5 ಸಾವಿರಕ್ಕೂ ಹೆಚ್ಚು ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ

By

Published : Jun 29, 2020, 8:12 PM IST

ಹೈದರಾಬಾದ್: ತೆಲಂಗಾಣದಲ್ಲಿ 5 ಸಾವಿರಕ್ಕೂ ಹೆಚ್ಚು ಕೋವಿಡ್ -19 ರೋಗಿಗಳು ಟೆಲಿಮೆಡಿಸಿನ್ ಸೌಲಭ್ಯದ ಮೂಲಕ ತಮ್ಮ ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವ ಇ.ರಾಜೇಂದರ್ ತಿಳಿಸಿದ್ದಾರೆ.

ಒಟ್ಟು 7,109 ಕೊರೊನಾ ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪೆಯುತ್ತಿದ್ದು, 1,438 ಜನರು ಚೇತರಿಸಿಕೊಂಡಿದ್ದಾರೆ ಮತ್ತು 5,671 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕೇವಲ 26 ಮಂದಿಯನ್ನು ಮಾತ್ರ ತಮ್ಮ ಮನೆಗಳಿಂದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿ, ಲಕ್ಷಣರಹಿತ ಅಥವಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವವರು ಮನೆಯಲ್ಲೇ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲ 7 ರಿಂದ 10 ದಿನಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸಚಿವರು ಹೇಳಿದರು.

ಭಾನುವಾರದ ಹೊತ್ತಿಗೆ, ತೆಲಂಗಾಣದಲ್ಲಿ 9,000 ಸಕ್ರಿಯ ಪ್ರಕರಣಗಳಿವೆ. 3,000ಕ್ಕೂ ಹೆಚ್ಚು ಮಂದಿ ವಿವಿಧ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಜನರು ಚಿಂತಿಸಬೇಕಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳು, ವೆಂಟಿಲೇಟರ್, ಔಷಧಿಗಳ ಕೊರತೆಯಿಲ್ಲ ಎಂದು ಆರೋಗ್ಯ ಸಚಿವರು ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details