ನವದೆಹಲಿ: ನಟನೆಯಿಂದ ರಾಜಕಾರಣಕ್ಕೆ ಧುಮುಕಿದ್ದ ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಬಿಜೆಪಿಯಿಂದ ಕಾಂಗ್ರೆಸ್ಗೆ ಪಕ್ಷಾಂತರ ಮಾಡಲು ಸಿದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ್ದಾರೆ.
ಗುರುವಾರ ರಾಗಾ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶತ್ರುಘ್ನ ಸಿನ್ಹಾ, ಅತ್ಯಂತ ನೋವಿನಿಂದ ಬಿಜೆಪಿ ತೊರೆಯುತ್ತಿದ್ದೇನೆ ಎಂದು ಹೇಳಿದರು.