ಜಮ್ಮು ಮತ್ತು ಕಾಶ್ಮೀರ: ಪಾಕಿಸ್ತಾನ ಸೈನ್ಯ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಎರಡು ವಲಯಗಳಲ್ಲಿ ಮಂಗಳವಾರ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್‌ಒಸಿ) ಗುಂಡಿನ ದಾಳಿ ಮತ್ತು ಶೆಲ್ ದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಿಲ್ಲೆಯ ಗಡಿ ಭಾಗದ ಜನವಸತಿ ಪ್ರದೇಶಗಳನ್ನೇ ಗುರಿಯಾಗಿಸಿ ಪಾಕಿಸ್ತಾನ ಪಡೆ ದಾಳಿ ನಡೆಸಿದೆ. ದಾಳಿಯಿಂದ ಕೆಲ ಮನೆಗಳು ಧ್ವಂಸಗೊಂಡಿವೆ ಎಂಬ ಮಾಹಿತಿ ತಿಳಿದು ಬಂದಿದೆ. 60 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಹಾಗೂ ನಾಲ್ವರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.