ಕರ್ನಾಟಕ

karnataka

ETV Bharat / bharat

ಗಡಿಯಲ್ಲಿ ಪಾಕ್​​ನಿಂದ ಮತ್ತೆ ಅಪ್ರಚೋದಿತ ಶೆಲ್​​ ದಾಳಿ

ಪಾಕ್ ಸೇನೆ ನೌಶೆರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ತೀವ್ರ ಶೆಲ್ ದಾಳಿ ಮಾಡುವ ಮೂಲಕ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

Pak army shells forward areas along LoC in J-K's Rajouri
ಗಡಿ ನಿಯಂತ್ರಣ ರೇಖೆಯಲ್ಲಿ ನಿಯಮ ಉಲ್ಲಂಘಿಸಿದ ಪಾಕ್....ಪ್ರತೀಕಾರ ತೀರಿಸಿದ ಭಾರತೀಯ ಸೈನ್ಯ

By

Published : Sep 1, 2020, 8:01 AM IST

ಜಮ್ಮು-ಕಾಶ್ಮೀರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೇನೆ ನಿಯಮ ಉಲ್ಲಂಘಿಸಿ​​ ದಾಳಿ ನಡೆಸಿದ್ದು, ಭಾರತೀಯ ಸೇನೆ ಸೂಕ್ತ ಪ್ರತೀಕಾರ ತೀರಿಸಿಕೊಂಡಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕ್ ಸೇನೆ ನೌಶೆರಾ ವಲಯದಲ್ಲಿ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ತೀವ್ರ ಶೆಲ್ ದಾಳಿ ಮಾಡುವ ಮೂಲಕ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಭಾನುವಾರ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೇನೆಯ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಹುತಾತ್ಮರಾಗಿದ್ದಾರೆ. ಮೂಲಗಳ ಪ್ರಕಾರ, ಪಂಜಾಬ್‌ನ ಅಮೃತಸರ ನಿವಾಸಿ ಜೆಸಿಒ ರಾಜ್‌ವಿಂದರ್ ಸಿಂಗ್ ಅವರು ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ)ಯಲ್ಲಿ ಪಾಕ್​ನ ನಡೆಸಿದ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ABOUT THE AUTHOR

...view details