ಕುಪ್ವಾರ /ಬಾರಾಮುಲ್ಲಾ:ಪಾಕಿಸ್ತಾನವು ಭಾನುವಾರ ರಾತ್ರಿ ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಕೇರನ್ ಮತ್ತು ರಾಂಪುರ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ಚಕಮಕಿ ನಡೆಸಿದೆ.
ಗಡಿಯಲ್ಲಿ ಪಾಕ್ನಿಂದ ಮತ್ತೆ ಕ್ಯಾತೆ: ಕದನ ವಿರಾಮ ಉಲ್ಲಂಘನೆ - ಕುಪ್ವಾರ ಮತ್ತು ಬಾರಾಮುಲ್ಲಾ ಗಳಲ್ಲಿ ಅಪ್ರಚೋದಿತ ಗುಂಡಿನ ದಾಳಿ
ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳ ಎಲ್ಒಸಿ ಬಳಿ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ.
ಗಡಿಯಲ್ಲಿ ಮತ್ತೊಮ್ಮೆ ಪಾಕ್ನಿಂದ ಕದನ ವಿರಾಮ ಉಲ್ಲಂಘನೆ
ನಿನ್ನೆ ರಾತ್ರಿ ಸುಮಾರು 11 ಗಂಟೆ ಹಾಗೂ 12:40 ರ ಸುಮಾರಿಗೆ ಪಾಕ್ ಸೇನೆ ಕುಪ್ವಾರ ಮತ್ತು ಬಾರಾಮುಲ್ಲಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣಾ ರೇಖೆ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಭಾರತೀಯ ಸೇನೆ ಕೂಡ ಪಾಕ್ ಸೈನ್ಯಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ಮೂಲಗಳು ತಿಳಿಸಿವೆ.