ಇಸ್ಲಾಮಾಬಾದ್:ಜಮ್ಮು-ಕಾಶ್ಮೀರಕ್ಕೆ ನೀಡಲಾಗಿರುವ ಆರ್ಟಿಕಲ್ 370 ರದ್ಧತಿ ವಿಚಾರವನ್ನಿಟ್ಟುಕೊಂಡು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಇಂದು ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ ಕಣಿವೆ ನಾಡು ಜಮ್ಮು-ಕಾಶ್ಮೀರದ ವಿಚಾರವಾಗಿ ಉಭಯ ದೇಶಗಳ ನಡುವಿನ ಸಂಘರ್ಷ ಯುದ್ಧದತ್ತ ಸಾಗಿದರೆ ಪರಮಾಣು ಯುದ್ಧದಲ್ಲಿ ಯಾರು ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಎರಡು ರಾಷ್ಟ್ರಗಳು ಪರಮಾಣು ಶಸ್ತ್ರಾಸ್ತ್ರ ಹೊಂದಿವೆ. ಒಂದು ವೇಳೆ ಉಭಯ ದೇಶಗಳ ನಡುವೆ ಯುದ್ಧ ನಡೆದರೆ ಜಾಗತಿಕ ಮಟ್ಟದಲ್ಲಿ ಪ್ರಭಾವ ಬೀರುತ್ತದೆ ಎಂದಿರುವ ಇಮ್ರಾನ್ ಖಾನ್, ಸಮಸ್ಯೆ ಬಗೆಹರಿಸಲು ವಿಶ್ವದ ಸೂಪರ್ ಪವರ್ ದೇಶಗಳ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದಿದ್ದಾರೆ. ಈ ವಿಷಯದಲ್ಲಿ ಅವು ನಮಗೆ ಬೆಂಬಲ ನೀಡುತ್ತವೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದರು.