ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಭಾನುವಾರ ಶೆಲ್ ಮತ್ತು ಗುಂಡಿನ ದಾಳಿ ನಡೆಸಿದೆ.
ನಸುಕಿನಜಾವ 3.20ರ ಸುಮಾರಿಗೆ ಪಾಕಿಸ್ತಾನವು ಸಣ್ಣ ಶಸ್ತ್ರಾಸ್ತ್ರಗಳಿಂದ ಗುಂಡು ಹಾರಿಸುವುದರ ಮೂಲಕ ಮತ್ತು ಮಾಂಕೋಟೆ ವಲಯದ ನಿಯಂತ್ರಣ ರೇಖೆಯ ಉದ್ದಕ್ಕೂ ತೀವ್ರವಾದ ಶೆಲ್ ದಾಳಿ ನಡೆಸಿದೆ. ಈ ಮೂಲಕ ಅಪ್ರಚೋದಿತವಾಗಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ದೇವೇಂದರ್ ಆನಂದ್ ಹೇಳಿದ್ದಾರೆ.