ಕರ್ನಾಟಕ

karnataka

ETV Bharat / bharat

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಕಥುವಾ ಗಡಿಯಲ್ಲಿ ರಾತ್ರಿಯಿಡಿ ಗುಂಡಿನ ಚಕಮಕಿ - ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಕದನ ವಿರಾಮ ಉಲ್ಲಂಘನೆ

ಪಾಕಿಸ್ತಾನ ಪದೇ ಪದೆ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿಯನ್ನ ನಡೆಸಿದೆ.

ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾ
ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾ

By

Published : Oct 31, 2020, 5:25 PM IST

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಪಾಕಿಸ್ತಾನ ರೇಂಜರ್ಸ್ ಅಪ್ರಚೋದಿತ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘನೆ ಮಾಡಿದೆ.

ದಾಳಿಯಲ್ಲಿ ಭಾರತೀಯ ಪ್ರಜೆಗಳಿಗೆ ಮತ್ತು ಸೈನಿಕರಿಗೆ ಯಾವುದೇ ಹಾನಿಯಾಗಿಲ್ಲ. ಗಡಿಯುದ್ದಕ್ಕೂ ಶುಕ್ರವಾರ ರಾತ್ರಿ 9: 45 ರ ಸುಮಾರಿಗೆ ಹಿರಾನಗರ್ ಸೆಕ್ಟರ್‌ನ ಚಂದ್ವಾ, ಮಾಯಾರಿ ಮತ್ತು ಫಕೀರದಲ್ಲಿ ಗುಂಡಿನ ದಾಳಿ ಪ್ರಾರಂಭವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ಭದ್ರತಾ ಪಡೆ ಕೂಡ ಇದಕ್ಕೆ ಸರಿಯಾದ ಪ್ರತ್ಯುತ್ತರ ನೀಡಿದೆ ಶನಿವಾರ ಮುಂಜಾನೆ 4: 15 ರವರೆಗೆ ಗುಂಡಿನ ಚಕಮಕಿ ಮುಂದುವರೆಯಿತು ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details