ಕರ್ನಾಟಕ

karnataka

ETV Bharat / bharat

ಗಡಿಯಲ್ಲಿ ಪಾಕ್​ ಕ್ಯಾತೆ: ಮತ್ತೆ ಕದನ ವಿರಾಮ ಉಲ್ಲಂಘನೆ - ಬಾಲಕೋಟ್

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕ್​ ಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.

Pakistan violates ceasefire along LoC again
ಕದನ ವಿರಾಮ ಉಲ್ಲಂಘನೆ

By

Published : Aug 7, 2020, 10:41 AM IST

ಶ್ರೀನಗರ: ಗಡಿ ಭಾಗದಲ್ಲಿ ಉದ್ವಿಗ್ನತೆ ಹೆಚ್ಚಿಸುವ ಪ್ರಯತ್ನದಲ್ಲಿರುವ ಪಾಕಿಸ್ತಾನ ಇದೀಗ ಮತ್ತೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿದೆ.

ಇಂದು ಬೆಳಗ್ಗೆ 6.30 ರಿಂದ ಬಾಲಕೋಟ್ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ (ಎಲ್‌ಒಸಿ) ಪಾಕ್​ ಪಡೆ ಲಘು ಶಸ್ತ್ರಾಸ್ತ್ರದೊಂದಿಗೆ ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದೆ. ಭಾರತೀಯ ಪಡೆಯೂ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.

ಆ. 6 ರಂದು ಮಾಂಧರ್ ಸೆಕ್ಟರ್‌ನಲ್ಲಿ ಹಾಗೂ ಆ. 5 ರಂದು ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿತ್ತು. ಪರಿಣಾಮ ಮಂಕೋಟ್ ವಲಯದ ಅನೇಕ ಮನೆಗಳಿಗೆ ಹಾನಿಯಾಗಿತ್ತು.

ಈ ವರ್ಷದ ಆರಂಭದಿಂದಲೂ ಪಾಕ್​ ಪಡೆ 2,720 ಕ್ಕೂ ಹೆಚ್ಚು ಬಾರಿ ಕದನ ವಿರಾಮ ಉಲ್ಲಂಘಿದ್ದು, 21 ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಲ್ಲದೇ 94 ಮಂದಿ ಗಾಯಗೊಂಡಿದ್ದಾರೆ.

ABOUT THE AUTHOR

...view details