ಜಮ್ಮು ಕಾಶ್ಮೀರ: ಪೂಂಚ್ ಜಿಲ್ಲೆಯ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಭಾರತೀಯ ಸೇನೆಯು ಸೂಕ್ತ ಪ್ರತೀಕಾರ ತೀರಿಸಿಕೊಳ್ಳುತ್ತಿದೆ.
ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್!
ಪೂಂಚ್ ಜಿಲ್ಲೆಯ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆ ಸೂಕ್ತವಾಗಿ ಪ್ರತೀಕಾರ ತೀರಿಸಿಕೊಳ್ಳುತ್ತಿದೆ.
ceasefire
ಜಿಲ್ಲೆಯ ಮೆಂಧರ್ ಉಪ ವಿಭಾಗದ ಕೃಷ್ಣ ಘಾಟಿ ವಲಯದ ಎಲ್‌ಒಸಿ ಉದ್ದಕ್ಕೂ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆಯಾಗಿದೆ. ಕಳೆದ ಕೆಲ ದಿನಗಳಿಂದ ಪಾಕಿಸ್ತಾನ ನಿರಂತರ ಕದನ ವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ಇದರಿಂದ ನಾಗರಿಕರು ಮತ್ತು ಕೆಲ ಯೋಧರು ವೀರಮರಣವನ್ನಪ್ಪಿದ್ದಾರೆ.