ಜಮ್ಮು ಮತ್ತು ಕಾಶ್ಮೀರ: ಇಲ್ಲಿನ ಪೂಂಚ್ ಹಾಗೂ ರಾಜೌರಿ ಜಿಲ್ಲೆಯಲ್ಲಿ ಗುಂಡು ಹಾರಿಸಿ ಹಾಗೂ ಶೆಲ್ ದಾಳಿ ನಡೆಸಿ ಪಾಕಿಸ್ತಾನಿ ಪಡೆ ಕದನ ವಿರಾಮ ಉಲ್ಲಂಘಿಸಿದ್ದು, ಭಾರತೀಯ ಸೇನೆಯೂ ಪ್ರತ್ಯುತ್ತರ ನೀಡಿದೆ.
ಗಡಿಯಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ - ceasefire
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಹಾಗೂ ರಾಜೌರಿ ಜಿಲ್ಲೆಯಲ್ಲಿ ಇಂದು ನಸುಕಿನ ಜಾವ ಪಾಕಿಸ್ತಾನಿ ಪಡೆ ಕದನ ವಿರಾಮ ಉಲ್ಲಂಘಿಸಿದೆ.
ಕದನ ವಿರಾಮ ಉಲ್ಲಂಘಿಸಿದ ಪಾಕ್
ಇಂದು ನಸುಕಿನ ಜಾವ ಪೂಂಚ್ ಜಿಲ್ಲೆಯ ಬಾಲಕೋಟೆ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ದಾಳಿ ಪ್ರಾರಂಭಿಸಿದ ಪಾಕ್ ಸೇನೆ, ಬಳಿಕ ರಾಜೌರಿ ಜಿಲ್ಲೆಯಲ್ಲಿ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಭಾರತ-ಪಾಕ್ ಎರಡೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಪ್ರಾಣ ಹಾನಿಯ ಕುರಿತು ಇನ್ನೂ ವರದಿಯಾಗಿಲ್ಲ.
Last Updated : May 26, 2020, 9:39 AM IST