ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ನೌಗಮ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ.
ಬಾರಾಮುಲ್ಲಾದಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ - ಕದನ ವಿರಾಮ ಉಲ್ಲಂಘಿಸಿದ ಪಾಕ್
ಬಾರಾಮುಲ್ಲಾ ಜಿಲ್ಲೆಯ ನೌಗಮ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಭಾರತೀಯ ಸೇನೆಯೂ ತಕ್ಕ ಪ್ರತ್ಯುತ್ತರ ನೀಡಿದೆ.
ceasefire
ಭಾರತೀಯ ಸೇನೆಯು ಸೂಕ್ತವಾಗಿ ಪ್ರತೀಕಾರ ತೀರಿಸುತ್ತಿದೆ. ಇದಕ್ಕೂ ಮುನ್ನ ಜೂನ್ 25ರಂದು ಪಾಕಿಸ್ತಾನದ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಮ್ಯಾಚಿಲ್ ಸೆಕ್ಟರ್‌ನಲ್ಲಿ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ ಪ್ರದೇಶಗಳತ್ತ ಶೆಲ್ ದಾಳಿ ನಡೆಸಿತ್ತು.
ಕಳೆದ ಮೂರು ವಾರಗಳಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಕದನ ವಿರಾಮ ಉಲ್ಲಂಘನೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಕಣಿವೆಯಲ್ಲಿ ಉಗ್ರರ ಒಳನುಸುಳುವಿಕೆಗೆ ರಕ್ಷಣೆ ನೀಡಲು ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆಯನ್ನು ಆಶ್ರಯಿಸುತ್ತಿದೆ ಎಂದು ಭದ್ರತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Last Updated : Jun 30, 2020, 9:58 AM IST