ಕರ್ನಾಟಕ

karnataka

ETV Bharat / bharat

ಜಮ್ಮುವಿನ ಪೂಂಚ್​​ನಲ್ಲಿ ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್ ಸೇನೆ - ಕದನ ವಿರಾಮ

ಜೂನ್​​ 25, 30 ಸೇರಿದಂತೆ ಇಂದು ಬೆಳಿಗ್ಗೆಯೂ ಸಹ ಜಮ್ಮು ಕಾಶ್ಮೀರದ ಪೂಂಚ್​ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.

Pakistan violates ceasefire
ಸಾಂದರ್ಭಿಕ ಚಿತ್ರ

By

Published : Jul 2, 2020, 12:24 PM IST

ಪೂಂಚ್ (ಜಮ್ಮು ಕಾಶ್ಮೀರ): ಗಡಿ ನಿಯಂತ್ರಣಾ ರೇಖೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದ್ದು, ಭಾರತದ ಮೇಲೆ ಅಪ್ರಚೋದಿತ ಗುಂಡಿನ ಮಳೆಗರೆದಿದೆ.

ಬೆಳಿಗ್ಗೆ 9:30ರ ಸುಮಾರಿಗೆ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪಾಕಿಸ್ತಾನವು ಪೂಂಚ್​ ಜಿಲ್ಲೆಯ ಕಿರ್ನಿ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಜೂನ್ 30 ರಂದು ಬೆಳಗ್ಗೆ, ಪಾಕಿಸ್ತಾನವು ಜಮ್ಮುವಿನ ನೌಗಮ್ ಸೆಕ್ಟರ್‌ನಲ್ಲಿ (ಉತ್ತರ ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ) ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮ ಉಲ್ಲಂಘಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.

ಜೂನ್ 25 ರಂದು ಸಹ ಪಾಕಿಸ್ತಾನದ ಪಡೆಗಳು ಜಮ್ಮು ಕಾಶ್ಮೀರದ ಮ್ಯಾಚಿಲ್ ಸೆಕ್ಟರ್‌ನಲ್ಲಿ ಕದನ ವಿರಾಮ ಉಲ್ಲಂಘಿಸಿ ಭಾರತದ ಮುಂಚೂಣಿ ಗಡಿ ಠಾಣೆಗಳತ್ತ ಅಟ್ಯಾಕ್‌ ಮಾಡಿವೆ.

ಕಳೆದ ಮೂರು ವಾರಗಳಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಕದನ ವಿರಾಮ ಉಲ್ಲಂಘನೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ.

ಉಗ್ರರು ನುಸುಳಲು ಪಾಕ್‌ನಿಂದ ಕುಕೃತ್ಯ:

ಕಣಿವೆಯಲ್ಲಿ ಉಗ್ರರ ಒಳನುಸುಳುವಿಕೆಗೆ ಅನುವು ಮಾಡಿಕೊಡಲು ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ಭದ್ರತಾ ಅಧಿಕಾರಿಗಳು ಹೇಳಿದ್ದಾರೆ.

ABOUT THE AUTHOR

...view details