ಪೂಂಚ್:ಮಂಕೋಟೆ ವಲಯದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ಪಾಕ್ ಸೇನೆ ನಡೆಸಿದ ಶೆಲ್ ದಾಳಿಯಲ್ಲಿ ಭಾರತದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಒಬ್ಬರು ಗಾಯಗೊಂಡಿದ್ದಾರೆ.
ಪಾಕ್ ಸೇನೆಯಿಂದ ಅಪ್ರಚೋದಿತ ಶೆಲ್ ದಾಳಿ: ಉದ್ಧಟತನಕ್ಕೆ ದಿಟ್ಟ ಪ್ರತ್ಯುತ್ತರ - ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಜೆಸಿಒಗೆ ಗಾಯ
ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಮತ್ತೆ ಕದನ ವಿರಾಮ ಉಲ್ಲಂಘಿಸಿದೆ. ವೈರಿ ದೇಶದ ಉದ್ಧಟತನಕ್ಕೆ ಭಾರತೀಯ ಸೇನೆ ದಿಟ್ಟ ಪ್ರತ್ಯುತ್ತರ ನೀಡಿದೆ.
ಈ ಬಗ್ಗೆ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ದೇವೇಂದರ್ ಆನಂದ್ ಮಾಹಿತಿ ನೀಡಿದ್ದು, ಇಂದು ಮುಂಜಾನೆ 5.15 ರ ಸುಮಾರಿಗೆ ಪಾಕಿಸ್ತಾನವು ಪೂಂಚ್ ಜಿಲ್ಲೆಯ ಮಂಕೋಟೆ ಸೆಕ್ಟರ್‌ನಲ್ಲಿನ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಶೆಲ್ ದಾಳಿ ನಡೆಸಿದೆ. ಈ ದಾಳಿಯ ಮೂಲಕ ಪಾಕ್ ಕದನ ವಿರಾಮ ಉಲ್ಲಂಘನೆ ಮಾಡಿದೆ. ಭಾರತೀಯ ಸೇನೆ ಇದಕ್ಕೆ ದಿಟ್ಟ ಪ್ರತ್ಯುತ್ತರ ನೀಡಿದೆ ಎಂದು ತಿಳಿಸಿದ್ದಾರೆ.
ಈ ವರ್ಷದ ಆರಂಭದಿಂದಲೂ ಪಾಕಿಸ್ತಾನವು ದ್ವಿಪಕ್ಷೀಯ ಕದನ ವಿರಾಮ ಒಪ್ಪಂದವನ್ನು ಮೀರುತ್ತಲೇ ಬಂದಿದೆ. 3,190 ಬಾರಿ ನಡೆದ ಕದನ ವಿರಾಮ ಉಲ್ಲಂಘನೆಯಲ್ಲಿ 24 ಜನ ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
TAGGED:
Pakistan ceasefire violation