ಕರ್ನಾಟಕ

karnataka

ETV Bharat / bharat

ಭವಿಷ್ಯದಲ್ಲಿ ಪಾಕಿಸ್ತಾನ ಪ್ರಮುಖ ದೇಶವಾಗುತ್ತಂತೆ... ಸೌದಿ ರಾಜಕುಮಾರನ ಮಾತು

ಪಾಕಿಸ್ತಾನ ಪ್ರವಾಸದಲ್ಲಿರುವ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಕೆಲವು ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಭವಿಷ್ಯದಲ್ಲಿ ಪಾಕಿಸ್ತಾನ ಪ್ರಮುಖ ದೇಶವಾಗಲಿದೆ ಎಂದಿದ್ದಾರೆ.

ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಹಾಗೂ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​

By

Published : Feb 18, 2019, 8:09 PM IST

ಇಸ್ಲಾಮಾಬಾದ್: ಎರಡು ದಿನಗಳ ಪಾಕಿಸ್ತಾನ ಪ್ರವಾಸದಲ್ಲಿರುವ ಸೌದಿ ಅರೇಬಿಯಾದ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಇಪ್ಪತ್ತು ಬಿಲಿಯನ್​ ಮೌಲ್ಯದ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದು ಆರ್ಥಿಕ ಸಂಕಷ್ಟದಲ್ಲಿರುವ ಪಾಕ್​ಗೆ ರಿಲೀಫ್ ನೀಡಲಿದೆ.

ಒಪ್ಪಂದದ ಬಳಿಕ ಮಾತನಾಡಿದ ಸೌದಿ ರಾಜಕುಮಾರ, ಇಂದು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಇದು ಉಭಯ ದೇಶಗಳ ಸಂಬಂಧ ವೃದ್ಧಿಸುವ ನಿಟ್ಟಿನಲ್ಲಿ ಬಹುಮುಖ್ಯ ಪಾತ್ರ ವಹಿಸಲಿದೆ ಎಂದರು.

ಪಾಕಿಸ್ತಾನ ಭವಿಷ್ಯದಲ್ಲಿ ಅತ್ಯಂತ ಪ್ರಮುಖವಾದ ದೇಶವಾಗಿ ಬೆಳೆಯಲಿದೆ. ಹೀಗಾಗಿ ಆ ದೇಶದೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಲು ಬಯಸುತ್ತೇವೆ ಎಂದು ಮೊಹಮ್ಮದ್ ಬಿನ್ ಸಲ್ಮಾನ್ ಹೇಳಿದ್ದಾರೆ.

ಸೌದಿ ರಾಜಕುಮಾರ ಪಾಕ್ ಬಳಿಕ ಭಾರತಕ್ಕೆ ಬರಲಿದ್ದು, ಈ ವೇಳೆ ಪ್ರಧಾನಿ ಮೋದಿ ಹಾಗೂ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್​ರನ್ನು ಭೇಟಿಯಾಗಲಿದ್ದಾರೆ.

ABOUT THE AUTHOR

...view details