ಮುಂಬೈ:ಪಾಲ್ಘರ್ನಲ್ಲಿ ಸಾಧುಗಳ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿಯ ವಿರುದ್ಧ ತನಿಖೆ ಹಾಗೂ ಅವರ ವಿರುದ್ಧ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.
ಇದರ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಚಾರ್ಚ್ಶೀಟ್ ಅನ್ನು ತನಗೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.
ಈ ಮೊದಲು ಪ್ರಕರಣವನ್ನು ಎನ್ಐಎ ಅಥವಾ ಸಿಬಿಐಗೆ ವಹಿಸಬೇಕೆಂದು ಸುಪ್ರೀಂ ಕೋರ್ಟ್ಗೆ ಎರಡು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರ್ಕಾರದ ಪ್ರತಿಕ್ರಿಯೆ ಕೇಳಿತ್ತು.
ಇದಾದ ನಂತರದಲ್ಲಿ ಮೂರು ವಾರಗಳ ನಂತರ ಪಾಲ್ಘರ್ ಪ್ರಕರಣದ ಬಗ್ಗೆ ವಿಚಾರಣೆ ನಡೆದಿದ್ದು, ನಿರ್ಲಕ್ಷ್ಯದ ಆರೋಪದ ಮೇಲೆ ಪೊಲೀಸರ ವಿರುದ್ಧ ಯಾವ ಕ್ರಮ ಕೈಗೊಂಡಿದ್ದಾರೆಂಬುದರ ಬಗ್ಗೆ ಮಾಹಿತಿ ನೀಡಿ ಎಂದು ಸುಪ್ರೀಂ ಕೋರ್ಟ್ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚನೆ ನೀಡಿದೆ.