ಮುಂಬೈ(ಮಹಾರಾಷ್ಟ್ರ): ಪಾಲ್ಘರ್ ಜಿಲ್ಲೆಯಲ್ಲಿ ಮೂವರನ್ನು ಗುಂಪು ಹತ್ಯೆಗೈದ ಅಪರಾಧಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಭಾನುವಾರ ರಾತ್ರಿ ಹೇಳಿದ್ದಾರೆ.
"ಪಾಲ್ಘರ್ ಘಟನೆಯನ್ನು ವಿರೋಧಿಸಿ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಅಪರಾಧ ಬಡೆದ ದಿನದಂದು 2 ಸಾಧುಗಳು, ಒಬ್ಬ ಚಾಲಕ ಸೇರಿದಂತೆ ಪೊಲೀಸ್ ಸಿಬ್ಬಂದಿ ಮೇಲೆಯೂ ಹಲ್ಲೆ ನಡೆದಿದೆ. ಸದ್ಯ ಎಲ್ಲಾ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಘೋರ ಅಪರಾಧ ಮತ್ತು ನಾಚಿಕೆಗೇಡಿನ ಕೃತ್ಯದಲ್ಲಿ ಭಾಗಿಯಾದ ಯಾರನ್ನೂ ರಕ್ಷಿಸಲಾಗುವುದಿಲ್ಲ" ಎಂದು ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.