ನವದೆಹಲಿ: ನಿಮ್ಮ ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್ ಜೋಡಣೆ ಮಾಡಲು ಸೆಪ್ಟೆಂಬರ್ 30 ಕೊನೆ ದಿನ ಎಂದು ಈ ಕೇಂದ್ರ ಸರ್ಕಾರ ಗಡುವು ನೀಡಿತ್ತು. ಆದರೆ ಇದೀಗ ಅದನ್ನ ಮೂರು ತಿಂಗಳ ಕಾಲ ವಿಸ್ತರಣೆ ಮಾಡಿ ಹೊಸ ಆದೇಶ ಹೊರಡಿಸಿದೆ.
ಆಧಾರ್-ಪಾನ್ ಜೋಡಣೆಗೆ ಸೆ.30 ಅಲ್ಲ, ಡಿ. 31 ಕೊನೆ ದಿನ... ಮೂರು ತಿಂಗಳ ಗಡುವು ವಿಸ್ತರಣೆ - ಆಧಾರ್ ಕಾರ್ಡ್
ಪಾನ್ ಕಾರ್ಡ್ಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಮಾಡುವ ಗಡುವು ವಿಸ್ತರಣೆಗೊಂಡಿದ್ದು, ಸೆಪ್ಟೆಂಬರ್ 30ರ ಬದಲಿಗೆ ಡಿಸೆಂಬರ್ 31 ಕೊನೆಯ ದಿನವಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ತೆರಿಗೆ ಇಲಾಖೆ ಹೊಸ ಪ್ರಕಟಣೆ ಹೊರಡಿಸಿದ್ದು, ಸದ್ಯ ನೀಡಿದ್ದ ಗಡುವು ವಿಸ್ತರಣೆ ಮಾಡಿ ಸೆಪ್ಟೆಂಬರ್ 30ರೊಳಗೆ ಜೋಡಣೆ ಮಾಡಲು ತಿಳಿಸಿದೆ. ಹೀಗಾಗಿ ಗ್ರಾಹಕರಿಗೆ ಸ್ವಲ್ಪ ಮಟ್ಟದ ರಿಲೀಫ್ ಸಿಕ್ಕಿದೆ.
ಸೆಪ್ಟೆಂಬರ್ 30ರೊಳಗೆ ಆಧಾರ್-ಪಾನ್ ಲಿಂಕ್ ಮಾಡದೇ ಹೋದರೆ ಪಾನ್ ಕಾರ್ಡ್ ನಿಷ್ಕ್ರಿ ಯಗೊಳ್ಳಲಿದೆ ಎಂದು ಹೇಳಲಾಗಿತ್ತು. ಇದರಿಂದ ನಿತ್ಯ ವ್ಯವಹಾರಗಳ ಮೇಲೆ ಪರಿಣಾಮ ಬೀರಲಿದೆ ಎಂಬ ಮಾತು ಕೇಳಿ ಬಂದಿದ್ದವು. ಆದರೆ ಇದೀಗ ಕೇಂದ್ರ ಸರ್ಕಾರ ತಾತ್ಕಾಲಿಕ ರಿಲೀಫ್ ನೀಡಿದೆ. ವಿಶೇಷವೆಂದರೆ ಈ ಹಿಂದೆ ಕೂಡ ಅನೇಕ ಸಲ ಆಧಾರ್-ಪಾನ್ ಜೋಡಣೆಯ ದಿನಾಂಕ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು.