ನವದೆಹಲಿ: ಕೊರೊನಾ ಬಿಕ್ಕಟ್ಟಿನ ಕಾರಣದಿಂದ ಅವಧಿಗೆ ಮುನ್ನವೇ ಸಂಸತ್ ಅಧಿವೇಶನವನ್ನು ಮೊಟಕುಗೊಳಿಸಿದ ಮೂರು ತಿಂಗಳ ನಂತರ, ಸಂಸತ್ತಿನ ವಿವಿಧ ಸ್ಥಾಯಿ ಸಮಿತಿಗಳು ದೇಶದಲ್ಲಿ ಕೊರೊನಾ ಬಿಕ್ಕಟ್ಟಿನ ನಿರ್ವಹಣೆ ಕುರಿತು ಚರ್ಚಿಸಲು ಮತ್ತೆ ಸಭೆ ಸೇರಲಾರಂಭಿಸಿವೆ ಎಂದು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಈಗಾಗಲೇ ಹಲವಾರು ಸುತ್ತಿನ ಚರ್ಚೆಗಳನ್ನು ನಡೆಸಲಾಗಿದೆ ಎಂದು ಎಂ. ವೆಂಕಯ್ಯ ನಾಯ್ಡು ಹೇಳಿದ್ದಾರೆ.