ಕರ್ನಾಟಕ

karnataka

ETV Bharat / bharat

ನಾಳೆಯಿಂದ ಕೇಂದ್ರ ಬಜೆಟ್​ ಅಧಿವೇಶನ: ರಾಷ್ಟ್ರಪತಿ ಭಾಷಣ ಬಹಿಷ್ಕರಿಸಲು 16 ಪಕ್ಷಗಳಿಂದ ನಿರ್ಧಾರ - ದೆಹಲಿ ಟ್ರ್ಯಾಕ್ಟರ್ ಪರೇಡ್​

ಮಹಾಮಾರಿ ಕೊರೊನಾ ವೈರಸ್​ನಿಂದಾಗಿ ಅನಿಶ್ಚಿತಗೊಂಡಿದ್ದ ಸಂಸತ್ತಿನ ಬಜೆಟ್​ ಅಧಿವೇಶನ ನಾಳೆಯಿಂದ ಆರಂಭಗೊಳ್ಳಲಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದಾರೆ.

GN Azad
GN Azad

By

Published : Jan 28, 2021, 3:13 PM IST

ನವದೆಹಲಿ:ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಆರಂಭದಲ್ಲಿ ಜಂಟಿ ಅಧಿವೇಶನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ.

ಓದಿ: ವಾಟ್ಸ್​ಆ್ಯಪ್​ ನೀತಿ ಪ್ರಶ್ನಿಸಿ ಸಿಇಒಗೆ ಪತ್ರ ಬರೆದ ಕೇಂದ್ರ ಸರ್ಕಾರ

ಇದೀಗ 16 ಪಕ್ಷಗಳು ರಾಷ್ಟ್ರಪತಿ ಭಾಷಣ ಬಹಿಷ್ಕಾರ ಮಾಡಲು ನಿರ್ಧರಿಸಿದ್ದು, ಇದರ ಬಗ್ಗೆ ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಆಜಾದ್​ ಮಾಹಿತಿ ನೀಡಿದ್ದಾರೆ. ಗಣರಾಜ್ಯೋತ್ಸವದಂದು ದೆಹಲಿಯಲ್ಲಿನ ರೈತರ ಟ್ರ್ಯಾಕ್ಟರ್ ಪರೇಡ್​ ವೇಳೆ ನಡೆದ ಹಿಂಸಾಚಾರದ ತನಿಖೆ ನಡೆಸುವಂತೆ ಒತ್ತಾಯಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ 16 ಪಕ್ಷಗಳಿಂದಲೂ ಸುತ್ತೋಲೆ ಹೊರಡಿಸಿದ್ದು, ನಾಳೆ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿಗಳು ಭಾಷಣ ಮಾಡಲಿದ್ದು, ಅದನ್ನು ಬಹಿಷ್ಕಾರ ಮಾಡಲಿದ್ದೇವೆ. ಜತೆಗೆ ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಬಲವಂತವಾಗಿ ಜಾರಿಗೊಳಿಸಿದ್ದು, ಅದಕ್ಕೆ ನಮ್ಮ ಸಮ್ಮತಿ ಇಲ್ಲ ಎಂದಿದ್ದಾರೆ. ನಾಳೆಯಿಂದ ಕೇಂದ್ರ ಬಜೆಟ್ ಅಧಿವೇಶನ ಆರಂಭಗೊಳ್ಳಲಿದ್ದು, ಫೆ. 1ರಂದು ನಿರ್ಮಲಾ ಸೀತಾರಾಮನ್​ ಬಜೆಟ್ ಮಂಡನೆ ಮಾಡಲಿದ್ದಾರೆ.

ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಪರೇಡ್​ನಲ್ಲಿ ಪೊಲೀಸರ ಮೇಲೆ ಕೆಲ ಪ್ರತಿಭಟನಾಕಾರರು ಹಲ್ಲೆ ನಡೆಸಿ ಸರ್ಕಾರಿ ಆಸ್ತಿ ಧ್ವಂಸಗೊಳಿಸಿರುವ ಘಟನೆ ನಡೆದಿದ್ದು, ಇದರಲ್ಲಿ 300ಕ್ಕೂ ಅಧಿಕ ಪೊಲೀಸರಿಗೆ ಗಾಯಗಳಾಗಿವೆ.

ABOUT THE AUTHOR

...view details