ಕರ್ನಾಟಕ

karnataka

ETV Bharat / bharat

ಪ್ರತಿಪಕ್ಷದವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ: ಸಚಿವ ನರೇಂದ್ರ ಸಿಂಗ್ ತೋಮರ್ - ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಅಂಗೀಕಾರ

ಮಸೂದೆಗಳು ಐತಿಹಾಸಿಕವಾಗಿದ್ದು, ರೈತರ ಜೀವನದಲ್ಲಿ ಬದಲಾವಣೆ ತರುತ್ತವೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ. ಪ್ರತಿಪಕ್ಷದ ನಾಯಕರು ರೈತರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೂಡ ಹೇಳಿದ್ದಾರೆ.

ಸಚಿವ ನರೇಂದ್ರ ಸಿಂಗ್ ತೋಮರ್
ಸಚಿವ ನರೇಂದ್ರ ಸಿಂಗ್ ತೋಮರ್

By

Published : Sep 20, 2020, 9:54 PM IST

ನವದೆಹಲಿ:ರಾಜ್ಯಸಭೆಯಲ್ಲಿ ಇಂದು ತೀವ್ರ ವಿರೋಧದ ನಡುವೆಯೂ ಎರಡು ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸಲಾಗಿದೆ. ಪ್ರತಿಪಕ್ಷದ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ರು, ಅಲ್ಲದೇ ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ಬೃಹತ್ ಪ್ರತಿಭಟನೆ ನಡೆಸಿದ್ದರೂ ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಕೃಷಿಗೆ ಸಂಬಂಧಿಸಿದ ಈ ಮಸೂದೆಗಳು ರೈತರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರುತ್ತವೆ. ಕೃಷಿ ಆರ್ಥಿಕತೆಯನ್ನು ಬಲಪಡಿಸುತ್ತದೆ. ಪ್ರತಿಪಕ್ಷದ ನಾಯಕರು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್

ಈಟಿವಿ ಭಾರತ ಜೊತೆ ಮಾತನಾಡಿದ ಅವರು, ಎರಡು ಮಸೂದೆಗಳು ಐತಿಹಾಸಿಕವಾಗಿದ್ದು, ರೈತರ ಜೀವನದಲ್ಲಿ ಬದಲಾವಣೆ ತರಲಿದೆ. ರೈತರು ತಮ್ಮ ಉತ್ಪನ್ನಗಳನ್ನು ದೇಶದಲ್ಲಿ ಎಲ್ಲಿಯಾದರೂ ಮುಕ್ತವಾಗಿ ವ್ಯಾಪಾರ ಮಾಡಲು ಸಾಧ್ಯವಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರೈತರ ಹಿತಾಸಕ್ತಿಗಳನ್ನು ಕಾಪಾಡಲಾಗಿದೆ ಎಂದರು.

ಈ ಮಸೂದೆಯು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಂಡಿಗಳ ಹೊರಗೆ ಮಾರಾಟ ಮಾಡಲು ಸ್ವಾತಂತ್ರ್ಯವನ್ನು ನೀಡುತ್ತದೆ. ಪ್ರತಿಭಟನೆಗಳು ರಾಜಕೀಯ ಪ್ರೇರಿತವಾಗಿವೆ. ಈ ಮಸೂದೆ ರೈತನಿಗೆ ಪ್ರಯೋಜನಕಾರಿಯಾಗಲಿದೆ ಎಂದು ನಾವು ಭರವಸೆ ನೀಡುತ್ತೇವೆ ಎಂದು ಕೃಷಿ ಮಸೂದೆಯನ್ನು ಸ್ವಾಗತಿಸಿದ ಕೇಂದ್ರ ಕೃಷಿ ರಾಜ್ಯ ಸಚಿವ ಕೈಲಾಶ್ ಚೌಧರಿ ಹೇಳಿದ್ದಾರೆ.

ABOUT THE AUTHOR

...view details