ನವದೆಹಲಿ:ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಸಿಬ್ಬಂದಿ ಪ್ರಯಾಣಿಕನೋರ್ವನ ಬಳಿ ಇದ್ದ 7.65 ಎಂಎಂ ಕ್ಯಾಲಿಬರ್‌ನ 20 ಜೀವಂತ ಗುಂಡುಗಳನ್ನು ಜಪ್ತಿ ಮಾಡಿದ್ದಾರೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಳಿ 20 ಜೀವಂತ ಗುಂಡುಗಳು ಪತ್ತೆ - ವಿಮಾನ ಪ್ರಯಾಣಿಕನ ಬಳಿ ಜೀವಂತ ಗುಂಡು ಪತ್ತೆ
ಡಿ. 23 ರಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೋರ್ವನ ಬಳಿ ಇದ್ದ 20 ಜೀವಂತ ಗುಂಡುಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ.

ಈ ಗುಂಡುಗಳನ್ನು ಇಟ್ಟುಕೊಂಡು ಪ್ರಯಾಣಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸೆಕ್ಯೂರಿಟಿ ಚೆಕ್ಕಿಂಗ್ ವೇಳೆ, ಔರಂಗಾಬಾದ್ನಿಂದ ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಆಗಮಿಸಿದ್ದ ಪ್ರಯಾಣಿಕನ ಹ್ಯಾಂಡ್ಬ್ಯಾಗ್ನಲ್ಲಿ ಈ ಗುಂಡುಗಳು ಪತ್ತೆಯಾಗಿವೆ.
ಆರೋಪಿ ಸೂಕ್ತ ದಾಖಲೆ ನೀಡದ ಹಿನ್ನೆಲೆ ಆತನನ್ನು ದೆಹಲಿ ಪೊಲೀಸರ ವಶಕ್ಕೆ ನೀಡಿದ್ದಾಗಿ ಸಿಐಎಸ್ಎಫ್ ಮಾಹಿತಿ ನೀಡಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಓದಿ: ಜಾಗತಿಕ ಮಟ್ಟದಲ್ಲಿ ಕೋವ್ಯಾಕ್ಸಿನ್ ಗಮನಾರ್ಹ ಸಾಧನೆ : ಐಸಿಎಂಆರ್ ಟ್ವೀಟ್