ಹೈದರಾಬಾದ್:ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಮುನ್ನಡೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಮ್ಯಾಜಿಕ್ ನಂಬರ್ ದಾಟಿದೆ. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಪವರ್ಸ್ಟಾರ್ ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ ಕೂಡ ಮುಖಭಂಗ ಅನುಭವಿಸಿದೆ.
ನೂತನ ಪಕ್ಷ ಸ್ಥಾಪನೆ ಮಾಡಿ ಆಂಧ್ರದಲ್ಲಿ ಭಾರಿ ಹವಾ ಕ್ರಿಯೇಟ್ ಮಾಡಿದ್ದ ಪವನ್ ಕಲ್ಯಾಣ್ ಅಣ್ಣನಂತೆ ಪ್ಲಾಪ್ ಶೋ ನಡೆಸಿದ್ದಾರೆ. ಇಲ್ಲಿಯವರೆಗೆ ಜನಸೇನಾ ಪಾರ್ಟಿ ಖಾತೆರೆಯುವಲ್ಲಿ ವಿಫಲವಾಗಿದೆ.