ಮುಂಬೈ:ಬಾಲಿವುಡ್ನ ಖ್ಯಾತ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ(ಮೀಟೂ) ಆರೋಪ ಮಾಡಿರುವ ನಟಿ ಪಾಯಲ್ ಘೋಷ್ ಇಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರನ್ನ ಭೇಟಿ ಮಾಡಿದ್ದಾರೆ.
ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ... ಕೇಂದ್ರ ಸಚಿವರನ್ನು ಭೇಟಿ ಮಾಡಿದ ಪಾಯಲ್! - ನಟಿ ಪಾಯಲ್ ಘೋಷ್ ಸುದ್ದಿ
2014ರಲ್ಲಿ ನಡೆದ ಕಹಿ ಘಟನೆ ಬಗ್ಗೆ ನಟಿ ಮುಂಬೈ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು, ಇದೇ ವಿಚಾರವಾಗಿ ಇಂದು ಕೇಂದ್ರ ಸಚಿವರ ಭೇಟಿ ಮಾಡಿದ್ದಾರೆ.
ಕಳೆದ ಕೆಲ ದಿನಗಳ ಹಿಂದೆ ಟ್ವೀಟ್ ಮಾಡಿದ ನಟಿ, ಅನುರಾಗ್ ಕಶ್ಯಪ್ ನನ್ನ ಮೇಲೆ ಬಲಾತ್ಕಾರ ಮಾಡಲು ಯತ್ನಿಸಿದರು ಎಂದು ಆರೋಪಿಸಿದ್ದ ಘೋಷಿ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನರೇಂದ್ರ ಮೋದಿ ಅವರ ಬಳಿ ಮನವಿ ಮಾಡಿದ್ದರು. ಇಂದು ಕೇಂದ್ರ ಸಚಿವ ಅಠಆವಳೆ ಅವರನ್ನ ಭೇಟಿ ಮಾಡಿದರು. ಇದೇ ವಿಚಾರವಾಗಿ ಮಾತನಾಡಿದ ಸಚಿವರು ನಟಿಗೆ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದು, ತಕ್ಷಣವೇ ಅನುರಾಗ್ ಕಶ್ಯಪ್ ಅವರನ್ನ ಬಂಧನ ಮಾಡುವಂತೆ ಮುಂಬೈ ಪೊಲೀಸರಿಗೆ ಸೂಚಿಸಿದ್ದಾರೆ.
ದೂರು ನೀಡಲು ನಟಿ ಮುಂದೆ ಬಂದಿದ್ದಾರೆ. ಈಗಾಗಲೇ ಅನೇಕ ನಟರು ಸಪೋರ್ಟ್ ಮಾಡಿದ್ದು, ನನ್ನ ಪಕ್ಷದ ವತಿಯಿಂದ ಅವರಿಗೆ ರಕ್ಷಣೆ ಸಿಗಲಿದೆ ಎಂದಿದ್ದಾರೆ. ಇದೇ ವಿಚಾರವಾಗಿ ನಾನು ಅಮಿತ್ ಶಾ ಅವರಿಗೆ ಪತ್ರ ಬರೆಯಲಿದ್ದು, ಆದಷ್ಟು ಬೇಗ ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು. ಇದೇ ವೇಳೆ ಸಚಿವರಿಗೆ ನಟಿ ಧನ್ಯವಾದ ಹೇಳಿದ್ದಾಳೆ. 2014ರಲ್ಲಿ ನಡೆದ ಘಟನೆ ಇದಾಗಿದೆ. ಇವರಿಗೆ ಈಗಾಗಲೇ ನಟಿ ಕಂಗನಾ ರಣಾವತ್ ಬೆಂಬಲ ನೀಡಿದ್ದಾರೆ.