ನವದೆಹಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ಕರ್ನಾಟಕ ವಿಧಾನಸಭೆಯಲ್ಲಿ ನಡೆದ ವಿಶ್ವಾಸಮತ ಪರೀಕ್ಷೆಯಲ್ಲಿ ಸೋತಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕರ್ನಾಟಕದ ಜನತೆಗೆ ಸೋಲು: ಬಿಜೆಪಿ ವಿರುದ್ಧ ರಾಗಾ-ಪ್ರಿಯಾಂಕಾ ಕಿಡಿ - ನವದೆಹಲಿ
ಇದೀಗ ಕೆಲವರ ದುರಾಸೆಯೇ ಗೆದ್ದಿದೆ. ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಹಾಗೂ ಕರ್ನಾಟಕದ ಜನರಿಗೆ ಸೋಲುಂಟಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವರ ದುರಾಸೆ ಹಾಗೂ ಪಟ್ಟಭದ್ರ ಹಿತಾಸಕ್ತಿಗೆ ಜಯ ಸಿಕ್ಕಿದ್ದು, ಅಭಿವೃದ್ಧಿಯಲ್ಲಿ ಕರ್ನಾಟಕ ಜನರಿಗೆ ಸೋಲುಂಟಾಗಿದೆ. ಅವರು ಅಧಿಕಾರಕ್ಕೆ ಬರುವ ದಾರಿಯಲ್ಲಿ ಅಡ್ಡವಾಗಿದೆ ಎಂಬ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಹೊರಗೆ ಹಾಗೂ ಒಳಗೆ ಇಂಥವರ ದುರಾಸೆಗೆ ಗುರಿಯಾಗುತ್ತಲೇ ಬಂದಿತ್ತು. ಇದೀಗ ಅವರ ದುರಾಸೆಯೇ ಗೆದ್ದಿದೆ. ಪ್ರಜಾಪ್ರಭುತ್ವ, ಪ್ರಾಮಾಣಿಕತೆ ಹಾಗೂ ಕರ್ನಾಟಕದ ಜನರಿಗೆ ಸೋಲುಂಟಾಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಪ್ರಯಾಂಕಾ ಗಾಂಧಿ ವಾದ್ರಾ ಕೂಡಾ ಟ್ವೀಟ್ ಮಾಡಿದ್ದು, ಬಿಜೆಪಿ ವ್ಯವಸ್ಥಿತವಾಗಿ ಸಾಂವಿಧಾನಿಕ ಸಂಸ್ಥೆಗಳನ್ನು ಕಿತ್ತುಹಾಕುವ ಜೊತೆಗೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.