ರಾಜ್‌ಕೋಟ್(ಗುಜರಾತ್): ರಾಜ್ಯಸಭಾ ಚುನಾವಣೆಗೆ ಮುನ್ನ ಕೆಲ ಪಕ್ಷಗಳ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂಬ ವರದಿ ಕುರಿತಂತೆ ಕಾಂಗ್ರೆಸ್ ಮುಖಂಡ ಹಾರ್ದಿಕ್ ಪಟೇಲ್ ಕಿಡಿಕಾರಿದ್ದಾರೆ. ಅಂತಹ ಶಾಸಕರಿಗೆ ಜನರೇ ತಕ್ಕ ಶಾಸ್ತಿ ಮಾಡಬೇಕೆಂದು ಹೇಳಿದ್ದಾರೆ.
'ಕಳೆದ ಒಂದು ತಿಂಗಳಲ್ಲಿ ಬಿಜೆಪಿ ಕುದುರೆ ವ್ಯಾಪಾರದಲ್ಲಿ ತೊಡಗಿದೆ. 140 ರಿಂದ 150 ಕೋಟಿ ರೂಪಾಯಿ ಖರ್ಚು ಮಾಡಿದ್ದಾರೆ. ಈ ಹಣವನ್ನು ವೆಂಟಿಲೇಟರ್‌ಗಳನ್ನು ಖರೀದಿಸಲು ಖರ್ಚು ಮಾಡಿದ್ದರೆ ಕೊರೊನಾದಿಂದ ಸಾವನ್ನಪ್ಪುತ್ತಿರುವವರಲ್ಲಿ ಕೆಲವರನ್ನು ಉಳಿಸಬಹುದಿತ್ತು. ಜನಸಾಮಾನ್ಯರಿಗೆ ಮೋಸ ಮಾಡಿದ ಶಾಸಕರು ಹಣದ ದುರಾಸೆಯಿಂದ ಅಲ್ಲಿಗೆ ಹೋಗಿದ್ದಾರೆ' ಎಂದು ಹಾರ್ದಿಕ್ ಆರೋಪಿಸಿದ್ದಾರೆ.