ನವದೆಹಲಿ:ಆತ್ಮನಿರ್ಭರ ಭಾರತಕ್ಕೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಇಂದು ರಕ್ಷಣಾ ಕ್ಷೇತ್ರದಲ್ಲಿ ದೇಶ ಸ್ವಾವಲಂಬನೆ ಸಾಧಿಸುವ ವಿಚಾರವಾಗಿ ವೆಬ್ನಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.
ಭಾರತೀಯ ರಕ್ಷಣಾ ಉದ್ಯಮಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೆಲ ರಕ್ಷಣಾ ಸಾಧನಗಳ ಆಮದು ಮೇಲೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದರು.
ರಕ್ಷಣಾ ವಲಯದ ವೆಬ್ನಾರ್ದಲ್ಲಿ ಭಾಗಿಯಾಗಿ ನಮೋ ಮಾತು ಅನೇಕ ವರ್ಷಗಳಿಂದ ಭಾರತ ಅತಿದೊಡ್ಡ ಮಟ್ಟದಲ್ಲಿ ರಕ್ಷಣಾ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುತ್ತಿದೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಾಗ ನಾವು ಈ ಕ್ಷೇತ್ರದ ಉತ್ಪಾದನೆಯಲ್ಲಿ ಹೆಚ್ಚಿನ ಸಾಮರ್ಥ್ಯ ಹೊಂದಿದ್ದೆವು. ದುರದೃಷ್ಟವಶಾತ್, ಈ ವಿಷಯದಲ್ಲಿ ನಾವು ಅಗತ್ಯವಾದ ಗಮನ ಸೆಳೆಯಲು ಸಾಧ್ಯವಾಗಲಿಲ್ಲ ಎಂದರು.
ಸ್ವಾವಲಂಬಿ ಮಾರ್ಗದ ಮೂಲಕ ರಕ್ಷಣಾ ವಲಯದ ಉತ್ಪಾದನೆಯಲ್ಲಿ ಶೇ.74ರಷ್ಟು ಎಫ್ಡಿಐ (ವಿದೇಶಿ ನೇರ ಹೂಡಿಕೆ)ಗೆ ಅನುಮತಿ ನೀಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೋದಿ ಹೇಳಿದ್ದು, ರಕ್ಷಣಾ ಉತ್ಪಾದನೆ ಹೆಚ್ಚಿಸಲು ಖಾಸಗಿ ಬಂಡವಾಳ ಹೂಡಿಕೆಗೆ ಪ್ರಯತ್ನಿಸಲಾಗುತ್ತಿದೆ ಎಂದರು.
ಭಾರತೀಯ ರಕ್ಷಣಾ ಉದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುವ ಉದ್ದೇಶದಿಂದ ಕೆಲ ರಕ್ಷಣಾ ಸಾಧನಗಳ ಆಮದು ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.