ಕರ್ನಾಟಕ

karnataka

ETV Bharat / bharat

ಸಿಎಎ ವಿರೋಧಿ ಪ್ರತಿಭಟನಾ ಸ್ಥಳ ಶಾಹೀನ್‌ಬಾಗ್‌ಗೆ ಪೆಟ್ರೋಲ್ ಬಾಂಬ್? - ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನಾ ಸ್ಥಳ

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಅದನ್ನ ವಿರೋಧಿಸಿ ಶಾಹೀನ್‌ಬಾಗ್‌ನಲ್ಲಿ ಕಳೆದ 3 ತಿಂಗಳಿನಿಂದ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ. ಅದೇ ಪ್ರದೇಶದಲ್ಲೀಗ 5-6 ಪೆಟ್ರೋಲ್‌ ಬಾಂಬ್‌ಗಳು ಸಿಕ್ಕಿವೆ.

Petrol bomb was hurled nearby anti-CAA protest site
ಸಿಎಎ ವಿರೋಧಿ ಪ್ರತಿಭಟನಾ ಸ್ಥಳಕ್ಕೆ ಪೆಟ್ರೋಲ್ ಬಾಂಬ್ ಎಸೆದಿರುವ ಆರೋಪ

By

Published : Mar 22, 2020, 1:50 PM IST

ದೆಹಲಿ :ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನಾ ಸ್ಥಳದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ ಎಂದು ಶಾಹೀನ್‌ಬಾಗ್‌ನಲ್ಲಿದ್ದ ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ ಬಳಿಕ ಅದನ್ನ ವಿರೋಧಿಸಿ ಶಾಹೀನ್‌ಬಾಗ್‌ನಲ್ಲಿ ಕಳೆದ 3 ತಿಂಗಳಿನಿಂದ ನಿರಂತರ ಪ್ರತಿಭಟನೆ ನಡೆಸಲಾಗುತ್ತಿದೆ. ಮಹಿಳಾ ಪ್ರತಿಭಟನಾಕಾರರು ಜಮಾಯಿಸಿದ್ದ ಸ್ಥಳದಲ್ಲಿ ಬೆಳಗ್ಗೆ ಸುಮಾರು 9.30ರ ಹೊತ್ತಿಗೆ ಪೆಟ್ರೋಲ್​ ಬಾಂಬ್​ ಎಸೆಯಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರಿಗೆ 5-6 ಪೆಟ್ರೋಲ್​ ಬಾಂಬ್​ಗಳು ದೊರಕಿವೆ. ಅದೃಷ್ಟವಶಾತ್​ ಯಾವುದೇ ಸಾವು-ನೋವಾಗಿಲ್ಲ ಎಂದು ತಿಳಿದು ಬಂದಿದೆ.

ABOUT THE AUTHOR

...view details